ಹುಲಸೂರ: ತಾಲ್ಲೂಕು ಕೇಂದ್ರ ಸ್ಥಾನಮಾನ ದೊರೆತು ಹಲವು ವರ್ಷಗಳಾದರೂ ಹುಲಸೂರ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ಜನರು ಸಂಕಷ್ಟ ಅನುಭವಿಸುವಂತಾಗಿದೆ.

ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿದ ಆರ್ಒ ಘಟಕಗಳು ನಿರ್ವಹಣೆಯ ಕೊರತೆಯಿಂದ ಸ್ಥಗಿತಗೊಂಡಿದ್ದು, ಕೆಲವು ಪಾಳು ಘಟಕಗಳಾಗಿ ಉಳಿದಿವೆ. ಇದರಿಂದ ಗ್ರಾಮೀಣ ಪ್ರದೇಶದ ಜನರು ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಸ್ಥಾಪಿಸಲಾದ ಶುದ್ಧ ನೀರಿನ ಘಟಕಗಳು ಆರಂಭದಲ್ಲಿ ಕಡಿಮೆ ದರದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುತ್ತಿದ್ದವು. ಆದರೆ ಕಾಲಕ್ರಮೇಣ ನಿರ್ವಹಣೆಯ ಕೊರತೆ, ಯಂತ್ರೋಪಕರಣ ದೋಷ, ವಿದ್ಯುತ್ ಬಿಲ್ ಬಾಕಿ ಹಾಗೂ ಖಾಸಗಿ ಏಜೆನ್ಸಿಗಳ ಗುತ್ತಿಗೆ ಅವಧಿ ಮುಗಿದ ಕಾರಣ ಅನೇಕ ಘಟಕಗಳು ಕಾರ್ಯನಿರ್ವಹಣೆ ನಿಲ್ಲಿಸಿವೆ.

ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಹಳ್ಳಿಗಳಲ್ಲಿ ಆರ್ಒ ಘಟಕಗಳ ಯಂತ್ರೋಪಕರಣಗಳು ಹಾಳಾಗಿ ನಿಂತಿದ್ದು, ಕೆಲವು ಕಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಕಾರಣ ನೀರು ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ಗ್ರಾಮಸ್ಥರು ಬೋರ್ವೆಲ್ ಅಥವಾ ನಲ್ಲಿಯ ನೀರಿನ ಮೇಲೆ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಹುಲಸೂರ ತಾಲ್ಲೂಕು ವ್ಯಾಪ್ತಿಯಲ್ಲಿ ಹದಿನೆಂಟು ಹಳ್ಳಿಗಳು ಹಾಗೂ ಏಳು ಗ್ರಾಮ ಪಂಚಾಯಿತಿಗಳು ಇದ್ದರೂ ಎಲ್ಲೆಡೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತಿಲ್ಲ.

ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶುದ್ಧ ನೀರಿನ ಘಟಕಗಳ ನಿರ್ವಹಣೆ ಕುರಿತು ಸಮರ್ಪಕ ಗಮನ ಹರಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಲಕ್ಷಾಂತರ ರೂಪಾಯಿ ವೆಚ್ಚದ ಯಂತ್ರೋಪಕರಣಗಳು ದೂಳು ಹಿಡಿದು ಹಾಳಾಗುತ್ತಿವೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮನೆಗಳಲ್ಲಿ ಇರುವ ಮಕ್ಕಳು ಹಾಗೂ ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಬೇರೆ ಕೊಳವೆಬಾವಿ ಅಥವಾ ಜಲ ಜೀವನ್ ಮಿಷನ್ (ಜೆಜೆಎಂ) ನೀರನ್ನು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಆರೋಗ್ಯ ಸಮಸ್ಯೆಗಳ ಭಯವೂ ಎದುರಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಕೆಲವು ಘಟಕಗಳು ಹಲವು ವರ್ಷಗಳಿಂದ ಕೆಟ್ಟು ನಿಂತಿದ್ದರೂ ದುರಸ್ತಿ ಕಾರ್ಯ ಕೈಗೊಳ್ಳಲಾಗಿಲ್ಲ. ಈ ಘಟಕಗಳನ್ನು ಶೀಘ್ರವಾಗಿ ದುರಸ್ತಿ ಮಾಡಿ ಸಾರ್ವಜನಿಕ ಬಳಕೆಗೆ ತರುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಹಳ್ಳಿಗಳಲ್ಲಿ ಪಾಳು ಬಿದ್ದ ಆರ್ಒ ಘಟಕಗಳು

ಖಾಸಗಿ ನೀರಿನ ವ್ಯಾಪಾರ ಜೋರು

ಲಕ್ಷಾಂತರ ರೂಪಾಯಿ ಸಾರ್ವಜನಿಕ ಹಣ ವ್ಯರ್ಥ

ಶುದ್ಧ ನೀರಿನ ಘಟಕ ಹಾಳಾದ ನಂತರ ಜನರಿಗೆ ಕಷ್ಟವಾಗಿದೆ. ಮಹಿಳೆಯರು ದೂರದಿಂದ ನೀರು ತರಬೇಕಾಗಿದೆ. ಕೂಡಲೇ ದುರಸ್ತಿ ಮಾಡಬೇಕು

–ಶಾಹುರಾಜ್ ದಾದರಾವ, ಅಂಬೇವಾಡಿ ನಿವಾಸಿ

ಸರ್ಕಾರ ನಿರ್ಮಿಸಿದ ಘಟಕಗಳು ನಿರ್ವಹಣೆ ಇಲ್ಲದೆ ಹಾಳಾಗುತ್ತಿವೆ. ಇದರಿಂದ ಸಾರ್ವಜನಿಕ ಹಣ ವ್ಯರ್ಥವಾಗುತ್ತಿದೆ

–ಅಜಿತ್ ಸೂರ್ಯವಂಶಿ, ಸಾಮಾಜಿಕ ಕಾರ್ಯಕರ್ತ

ತಾಲ್ಲೂಕಿನ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ನಿರ್ವಹಣೆ ಕೊರತೆಯಿಂದ ಬಂದ್ ಆಗಿರುವ ಘಟಕಗಳನ್ನು ದುರಸ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ

–ಮಹಾದೇವ ಜಮ್ಮು, ತಾಲ್ಲೂಕು ಪಂಚಾಯಿತಿ ಇಒ

ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಶುದ್ಧ ಕುಡಿಯುವ ನೀರು ದೊರೆಯುವುದು ಅತ್ಯಂತ ಅಗತ್ಯ. ಸಮಸ್ಯೆಗಳ ಕುರಿತು ಮಾಹಿತಿ ಬಂದಲ್ಲಿ ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು

–ಶಿವಾನಂದ ಮೇತ್ರೆ, ತಹಶೀಲ್ದಾರ್

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆಗೆ ಪಂಚಾಯಿತಿ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಘಟಕಗಳನ್ನು ದುರಸ್ತಿ ಮಾಡುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ

–ಸಿದ್ದಲಿಂಗ, ಪಿಡಿಒ ಮೀರಖಲ ಗ್ರಾಪಂ

ಖಾಸಗಿ ಘಟಕಗಳ ನೀರಿನ ವ್ಯಾಪಾರ ಜೋರು

ಸರ್ಕಾರದ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸದ ಹಿನ್ನೆಲೆ ಹಲವು ಗ್ರಾಮಗಳಲ್ಲಿ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳ ವ್ಯಾಪಾರ ಜೋರಾಗಿದೆ.

ಕೆಲವು ಖಾಸಗಿ ಘಟಕಗಳು ನೀರನ್ನು ವಾಹನಗಳಲ್ಲಿ ಸಿಂಟೆಕ್ಸ್ ಟ್ಯಾಂಕ್ ಅಳವಡಿಸಿ ಮನೆಮನೆಗೆ ಪೂರೈಸುತ್ತಿವೆ. ಪ್ಲಾಸ್ಟಿಕ್ ಕ್ಯಾನ್ಗಳ ಮೂಲಕವೂ ನೀರು ಮಾರಾಟ ಮಾಡಲಾಗುತ್ತಿದೆ.

ಸರ್ಕಾರದ ಘಟಕಗಳು ಬಂದ್ ಆಗಿರುವುದರಿಂದ ಜನರು ಹೆಚ್ಚಿನ ದರದಲ್ಲಿ ಖಾಸಗಿ ಘಟಕಗಳ ನೀರನ್ನು ಖರೀದಿಸಬೇಕಾದ ಸ್ಥಿತಿ ಎದುರಾಗಿದೆ. ಕೆಲವೆಡೆ ನೀರಿನ ಶುದ್ಧೀಕರಣ ಪ್ರಕ್ರಿಯೆ ಸಮರ್ಪಕವಾಗಿದೆಯೇ ಎಂಬ ಪ್ರಶ್ನೆಗಳೂ ಕೇಳಿಬರುತ್ತಿವೆ. ಟ್ಯಾಂಕ್ಗಳು ಹಾಗೂ ನೀರಿನ ಕ್ಯಾನ್ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಲಾಗುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ.

ಬೇಕು ಶುದ್ಧ ಕುಡಿಯುವ ನೀರಿನ ಘಟಕ

ತಾಲ್ಲೂಕಿನ ಗುತ್ತಿ, ಮಾಚನಾಳ, ದೇವನಾಳ, ಮುಚ್ಚಲಂಬ, ಮುಸ್ಥಾಪುರ, ಲಿಂಬಾಪೂರ್, ಹಾಲಹಳ್ಳಿ, ಕದಿರಾಬಾದವಾಡಿ, ತೊಗಲೂರ, ವಾಂಜರವಾಡಿ, ಆನಂದವಾಡಿ, ಸೋಲದಾಪಕ ಹಾಗೂ ಭಂಗೆವಾಡಿ ಗ್ರಾಮಗಳಲ್ಲಿ ಇನ್ನೂ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾಗಿಲ್ಲ. ಈ ಗ್ರಾಮಗಳಿಗೆ ಕೂಡಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಆಕಾಶ ಖಂಡಾಳೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.