ಹುಲಸೂರ: ಮೊದಲ ಹಂತದ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ 36 ಜನ ಗಣತಿದಾರರು ಹಾಗೂ ಅವರ ಮೇಲ್ವಿಚಾರಕರನ್ನು ತಾಲ್ಲೂಕು ಆಡಳಿತ ವತಿಯಿಂದ ಶುಕ್ರವಾರ ಸತ್ಕರಿಸಲಾಯಿತು.

ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಾನಂದ ಮೇತ್ರೆ ಮಾತನಾಡಿ, ‘ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸಿದ ಗಣತಿದಾರರು ಹಾಗೂ ಮೇಲ್ವಿಚಾರಕರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿರುವುದು ಇತರರಿಗೆ ಮಾದರಿಯಾಗಿದೆ. ಮುಂದಿನ ಹಂತಗಳಲ್ಲಿಯೂ ಇದೇ ಉತ್ಸಾಹ ಹಾಗೂ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿ’ ಎಂದರು.

ಉಪತಹಶೀಲ್ದಾರ್ ಸಂಜುಕುಮಾರ ಅವರು ಮಾತನಾಡಿ, ‘ಗಣತಿ ಕಾರ್ಯವು ಕೇವಲ ಅಂಕಿಅಂಶಗಳ ಸಂಗ್ರಹವಲ್ಲ, ಜನಜೀವನದ ನೈಜ ಸ್ಥಿತಿಗತಿಗಳನ್ನು ಸರ್ಕಾರದ ಮುಂದೆ ಇಡುವ ಜವಾಬ್ದಾರಿಯುತ ಕಾರ್ಯವಾಗಿದೆ. ಇದರಲ್ಲಿ ಭಾಗವಹಿಸಿದ ಪ್ರತಿಯೊಬ್ಬರೂ ಶ್ರಮಪಟ್ಟು ಕಾರ್ಯನಿರ್ವಹಿಸಿರುವುದು ಶ್ಲಾಘನೀಯ’ ಎಂದರು.

ಈ ಸಂದರ್ಭದಲ್ಲಿ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸತ್ಕಾರ ಸ್ವೀಕರಿಸಿದ ಗಣತಿದಾರರು ತಮ್ಮ ಅನುಭವಗಳನ್ನು ಹಂಚಿಕೊಂಡು, ಅಧಿಕಾರಿಗಳ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಚೇರಿಯ ಸಿಬ್ಬಂದಿ ವರ್ಗದವರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣತಿ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-1536532603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.