ಹುಲಸೂರ: ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಜಾಗರೂಕತೆ ವಹಿಸಬೇಕಾದ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪಟ್ಟಣದ ಹಲವು ವಾರ್ಡ್ಗಳ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ 6, 7 ಮತ್ತು 8ನೇ ವಾರ್ಡ್ಗಳಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ನೀರು ಸರಬರಾಜಾಗುತ್ತಿಲ್ಲ. ಹಲವೆಡೆ ಕೊಳವೆ ಬಾವಿಗಳ ಅಂತರ್ಜಲ ಮಟ್ಟ ಕುಸಿದ ಪರಿಣಾಮ ನೀರಿನ ಕೊರತೆ ಉಂಟಾಗಿದ್ದು, ಪೈಪ್ಗಳನ್ನು ಇನ್ನಷ್ಟು ಕೆಳಕ್ಕೆ ಇಳಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೆಲವು ಕಡೆ ಮೋಟಾರ್ಗಳು ಕೆಟ್ಟು ದುರಸ್ತಿ ಆಗದೆ ಇರುವುದರಿಂದ ಸಮಸ್ಯೆ ಮತ್ತಷ್ಟು ಗಂಭೀರವಾಗಿದೆ ಎಂದು ದೂರಿದ್ದಾರೆ.

ವಾರ್ಡ್ ಸಂಖ್ಯೆ 8ರ ಬಸವಣ್ಣ ಕಟ್ಟೆ ಸಮೀಪ ಕಳೆದ 15 ದಿನಗಳಿಂದ ಮುಖ್ಯ ಪೈಪ್ ಒಡೆದು ನಿರಂತರವಾಗಿ ನೀರು ರಸ್ತೆ ಮೇಲೆ ಹರಿದು ಪೋಲಾಗುತ್ತಿದ್ದರೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗಣೇಶ ಮಂದಿರ ಹಾಗೂ ಶಿವಾಜಿ ಮಹಾರಾಜರ ವೃತ್ತದ ಸಮೀಪವೂ ಮುಖ್ಯ ಪೈಪ್ ಹಾನಿಗೊಳಗಾಗಿದ್ದರೂ ದುರಸ್ತಿಗೆ ಆಸಕ್ತಿ ತೋರದ ಪಂಚಾಯಿತಿ, ನೀರು ಸರಬರಾಜು ಶುಲ್ಕ ವಸೂಲಿಗೆ ಮಾತ್ರ ಆದ್ಯತೆ ನೀಡುತ್ತಿದೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ರೀತಿ ಬೇಜವಾಬ್ದಾರಿ ಮುಂದುವರಿದರೆ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಬೇಕಾಗುತ್ತದೆ ಎಂದು 6ನೇ ವಾರ್ಡ್ನ ಮಹಿಳೆಯರು ಎಚ್ಚರಿಕೆ ನೀಡಿದರು.

2023-24ನೇ ಸಾಲಿನಲ್ಲಿ ‘ಜಲೋತ್ಸವ ಮನೆ ಮನೆಗೆ ಗಂಗೆ’ ಯೋಜನೆಯಡಿ ಆರಂಭವಾದ ಕಾಮಗಾರಿಗೆ ಮೂರು ವರ್ಷ ಕಳೆದರೂ ಕಾಮಗಾರಿ ಕುಂಟುತ್ತಾ ಸಾಗುತ್ತಿದ್ದು, ಮನೆಮನೆಗೂ ನೀರು ಪೂರೈಕೆ ಆಗುವ ಲಕ್ಷಣ ಕಾಣಿಸುತ್ತಿಲ್ಲ ಎಂದು ಸಾರ್ವಜನಿಕರು ದೂರಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-33-331181703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.