ಹುಲಸೂರ: ಪಟ್ಟಣದ ವಿವಿಧ ವಾರ್ಡ್ಗಳಿಗೆ ಸರಬರಾಜಾಗುವ ಕುಡಿಯುವ ನೀರಿನ ಟ್ಯಾಂಕ್ ಸುತ್ತ ಅಸ್ವಚ್ಛತೆ ಆವರಿಸಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.

ಪಟ್ಟಣದಲ್ಲಿ ಸುಮಾರು 20 ಸಾವಿರ ಜನಸಂಖ್ಯೆ ಇದ್ದು, ಗುರು ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ನಿರ್ಮಿಸಿರುವ ಕುಡಿಯುವ ನೀರಿನ ಸಂಗ್ರಹ ಘಟಕದಿಂದ ಅರ್ಧಕ್ಕಿಂತ ಹೆಚ್ಚು ಜನರಿಗೆ ನೀರು ಪೂರೈಕೆಯಾಗುತ್ತಿದೆ. ಆದರೆ ಟ್ಯಾಂಕ್ ಸುತ್ತಲೂ ಸ್ವಚ್ಛತೆಯ ಕೊರತೆಯಿದ್ದು ನೀರಿನ ವಾಲ್ವ್ ಘಟಕದ ಬಳಿ ಹಂದಿ, ನಾಯಿಗಳು ತಿರುಗಾಡುತ್ತಿರುವುದು ಕಂಡುಬಂದಿದೆ. ಕಸದ ರಾಶಿ ಮತ್ತು ಕೊಳಚೆ ನೀರು ಸಂಗ್ರಹ ವಾಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಳಚೆ ನೀರು ಪೈಪ್ ಮಾರ್ಗದ ಮೂಲಕ ಕುಡಿಯುವ ನೀರಿಗೆ ಸೇರಿಕೊಳ್ಳುವ ಸಾಧ್ಯತೆ ಇರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

‘ಪಟ್ಟಣದ ಪ್ರಮುಖ ಕುಡಿಯುವ ನೀರಿನ ಘಟಕ ಇದಾಗಿದೆ. ಜನರಿಂದ ನೀರು ಸರಬರಾಜು ಶುಲ್ಕ ಪಡೆಯುವ ಗ್ರಾಮ ಪಂಚಾಯಿತಿ, ನೀರು ಸಂಗ್ರಹ ಘಟಕದ ಸುತ್ತಲೂ ಸ್ವಚ್ಛತೆ ಕಾಪಾಡುವಲ್ಲಿ ನಿರ್ಲಕ್ಷ್ಯ ತೋರಬಾರದು’ ಎಂದು ಪಟ್ಟಣದ ನಿವಾಸಿ ಮಲ್ಲಿಕಾರ್ಜುನ ಮೇತ್ರೆ ಆಗ್ರಹಿಸಿದರು.

ಕುಡಿಯುವ ನೀರಿನ ಘಟಕದ ಸುತ್ತಲಿನ ಕಸ ತೆರವುಗೊಳಿಸಿ, ವಾಲ್ವ್ ಪ್ರದೇಶವನ್ನು ಸ್ವಚ್ಛಗೊಳಿಸುವ ಜತೆ ನಿಯಮಿತ ನಿರ್ವಹಣೆ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-33-1667567673

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.