ಬೀದರ್: ‘ಸ್ತ್ರೀಯರ ಮೇಲಿನ ದೌರ್ಜನ್ಯ ತಡೆಗೆ ಜನಜಾಗೃತಿ ಬಹಳ ಅತ್ಯಗತ್ಯ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಸೂರಿನ ಒಡನಾಡಿ ಸೇವಾ ಸಂಸ್ಥೆ, ಸಮೃದ್ಧಿ ಚಾರಿಟಬಲ್ ಟ್ರಸ್ಟ್, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದ ಸಾಹಿತ್ಯ ಸಂಘದಲ್ಲಿ ಮಂಗಳವಾರ ‘ಮಾನವ ಕಳ್ಳ ಸಾಗಾಣಿಕೆ ತಡೆ’ ಕುರಿತು ಸಹಭಾಗೀದಾರ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರಿಗೆ ಏರ್ಪಡಿಸಿದ್ದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಸ್ತ್ರೀಯರ ಮೇಲೆ ಲೈಂಗಿಕ ದೌರ್ಜನ್ಯಗಳಷ್ಟೇ ಅಲ್ಲ, ಅಂಗಾಂಗಳ ಮಾರಾಟದ ಕೆಲಸವೂ ನಡೆಯುತ್ತಿದೆ. ಜಿಲ್ಲಾ, ತಾಲ್ಲೂಕು ಮತ್ತು ಗ್ರಾಮ ಮಟ್ಟಗಳಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆ ಸಮಿತಿ ಸಭೆ ಪ್ರತಿ ತಿಂಗಳು ನಡೆಸಿ, ಪರಾಮರ್ಶಿಸಬೇಕು. ಈ ಕುರಿತು ಜನಜಾಗೃತಿಯನ್ನು ಮೂಡಿಸಬೇಕು ಎಂದು ಸೂಚಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಎ. ಬನಸೋಡೆ ಮಾತನಾಡಿ, ಸಂವಿಧಾನದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಆದರೆ, ಮಹಿಳೆಯರ ಮತ್ತು ಮಕ್ಕಳ ಬದುಕುವ ಹಕ್ಕನ್ನು ನಾವು ಕಸಿದುಕೊಂಡಿದ್ದೇವೆ. ಮಾನವ ಕಳ್ಳ ಸಾಗಾಣಿಕೆಗೆ ತುತ್ತಾಗುತ್ತಿರುವವರು ಮಹಿಳೆಯರು ಮತ್ತು ಮಕ್ಕಳೇ ಜಾಸ್ತಿ. ಇದನ್ನು ಜಾಗೃತಿ ಮೂಲಕ ತಡೆಯಬೇಕಿದೆ ಎಂದರು.

ಮೈಸೂರು ಒಡನಾಡಿ ಸೇವಾ ಸಂಸ್ಥೆಯ ಕಾರ್ಯದರ್ಶಿ ಸ್ಟ್ಯಾನಿ ಕೆ.ವಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಅನಿಷ್ಠ ಪದ್ಧತಿ. ನಮ್ಮ ದೇಶವು ಮುಂದುವರೆದ ರಾಷ್ಟ್ರವಾದರೂ ಇದು ನಿಂತಿಲ್ಲ. ಮಕ್ಕಳನ್ನು ಬಾಲಕಾರ್ಮಿಕರಾಗಿ ದುಡಿಸುವುದು, ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವುದು ಹಾಗೂ ದೇಹದ ಅಂಗಗಳನ್ನು ತೆಗೆದು ಮಾರಾಟ ಮಾಡುಲಾಗುತ್ತಿದೆ. ಇದು ನಿಲ್ಲಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಮ್.ಎಸ್. ಮಾತನಾಡಿ, ಮಾನವ ಕಳ್ಳಸಾಗಾಣಿಕೆ ತಡೆಯಬೇಕಾದರೆ ಪೊಲೀಸ್ ಇಲಾಖೆ ಹಾಗೂ ಎಲ್ಲ ಸಹಭಾಗೀದಾರ ಇಲಾಖೆಗಳ ಪಾತ್ರ ಮುಖ್ಯವಾದುದು. ಇದರ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ನಮ್ಮ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಈ ಕುರಿತು ಮಾಹಿತಿಯನ್ನು ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ನೀಡಬೇಕು. ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆಯ ಜಾಲವನ್ನು ಪತ್ತೆ ಹಚ್ಚಿ ಅವರಿಗೆ ಶಿಕ್ಷೆ ಮತ್ತು ದಂಡ ವಿಧಿಸಬಹುದು ಎಂದರು.

ಪರಶುರಾಮ ಎಂ.ಎಲ್, ಸಮೃದ್ಧಿ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಮನಿಶಾ ಸಾಳೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಗೌರಿಶಂಕರ ಪರತಾಪೂರೆ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಎಮ್.ಎಸ್ ಶಿರೋಮಣಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.