ಚಿಟಗುಪ್ಪ (ಬೀದರ್): ಚಿಟಗುಪ್ಪ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಸುಭಾಷ್ ಚಂದ್ರ ಅವರನ್ನು ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಗ್ರೇಡ್–2 ತಹಶೀಲ್ದಾರ್ ಜಯಶ್ರೀ ಮತ್ತು ಅವರ ಪತಿ ಶಾರಧಕ ಸೇರಿ ಐವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಟ್ಟಣದ ತಹಶೀಲ್ದಾರ್ ಕಚೇರಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಭಾಷ್ ಚಂದ್ರ ಹಾಗೂ ಜಯಶ್ರೀ ನಡುವೆ ಕಚೇರಿ ಕೆಲಸದಲ್ಲಿ ತಕರಾರು ನಡೆದಿದ್ದ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ.

ನಡೆದಿದ್ದು ಏನು?: ‘ಮೇ 16ರಂದು ಕೆಲಸ ಮುಗಿಸಿಕೊಂಡು ಚಿಟಗುಪ್ಪ ದಿಂದ ಸ್ವಗ್ರಾಮ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಸುಲೆಪೇಟ ಗ್ರಾಮಕ್ಕೆ ಬಸ್ನಲ್ಲಿ ತೆರಳುತ್ತಿದ್ದೆ. ಈ ವೇಳೆ ಜಯಶ್ರೀ ಅವರ ಪ್ರಚೋದನೆಯಿಂದ ಪತಿ ಶಾರಧಕ ಹಾಗೂ ಇತರ ಮೂವರು ಚಿಟಗುಪ್ಪ ತಾಲ್ಲೂಕಿನ ಕುಡಂಬಲ್ ಗ್ರಾಮದ ಪೆಟ್ರೋಲ್ ಬಂಕ್ ಹತ್ತಿರದಲ್ಲಿ ಬಸ್ಗೆ ಕಾರು ಅಡ್ಡಹಾಕಿ ನನ್ನನ್ನು ಇಳಿಸಿಕೊಂಡು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ, ಡಾಬಾವೊಂದರ ಪಕ್ಕದಲ್ಲಿರುವ ಖಾಲಿ ಕೋಣೆಯಲ್ಲಿ ಕೂಡಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಓಡಿಹೋಗಿದ್ದಾರೆ’ ಎಂದು ಸುಭಾಷ್ ಚಂದ್ರ ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.