ಹುಮನಾಬಾದ್: ಸಿಸಿಟಿವಿ ಕ್ಯಾಮೆರಾಗಳ ಸಹಾಯದಿಂದ ಐದು ಜನ ಅಂತರರಾಜ್ಯ ಕಳ್ಳರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 9ರಂದು ರಾತ್ರಿ ದೇವಸ್ಥಾನದಲ್ಲಿನ ಹುಂಡಿ ಕಳ್ಳತನ ಪ್ರಕರಣ ನಡೆದಿತ್ತು. ಈ ಬಗ್ಗೆ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನೂತನವಾಗಿ ಸ್ಥಾಪನೆಗೊಂಡ ಕಂಟ್ರೋಲ್ ಕಮಾಂಡ್ ಸೆಂಟರ್ ವಿಭಾಗದಲ್ಲಿನ ಸಿಸಿಟಿವಿ ಕ್ಯಾಮೆರಾದ ಸಹಾಯದಿಂದ ಈ ಐದು ಜನ ಅಂತರರಾಜ್ಯ ಕಳ್ಳರನ್ನು ಬಂಧಿಸಲಾಗಿದೆ.

‘ಆರೋಪಿಗಳು ಹುಮನಾಬಾದ್ ಮಾರ್ಗವಾಗಿ ಬೀದರ್ ಕಡೆಗೆ ಹೋಗುತ್ತಿರುವ ಖಚಿತ ಮಾಹಿತಿ ಮೇರೆಗೆ ತಾಲ್ಲೂಕಿನ ಧುಮ್ಮನಸೂರ್ ಗ್ರಾಮ ಹತ್ತಿರದಲ್ಲಿ ದಾಳಿ ಮಾಡಿ ಬಂಧಿಸಲಾಗಿದೆ’ ಎಂದು ಪಿಎಸ್ಐ ಸುರೇಶ್ ಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.