ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ತೂರಬಾಯಿ ಅಧ್ಯಕ್ಷೆ, ಸತ್ಯವತಿ ಉಪಾಧ್ಯಕ್ಷೆ

ಕಾಂಗ್ರೆಸ್ ತೆಕ್ಕೆಗೆ ಹುಮನಾಬಾದ್ ಪುರಸಭೆ; ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ– ಉಪಾಧ್ಯಕ್ಷರು
Last Updated 7 ನವೆಂಬರ್ 2020, 2:11 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಪುರಸಭೆಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಕಸ್ತೂರಬಾಯಿ ನರಸಪ್ಪ ಪರಸನೊರ್ ಮತ್ತು ಉಪಾಧ್ಯಕ್ಷೆಯಾಗಿ ಸತ್ಯವತಿ ಸೋಮಯ್ಯ ಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದ ಹಿನ್ನಲೆಯಲ್ಲಿ ನಿಗದಿತ ಅವಧಿಗೆ ಚುನಾವಣಾಧಿಕಾರಿಗಳು ಪುರಸಭೆ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆಯ ಅವಿರೋಧ ಆಯ್ಕೆ ಘೋಷಿಸಿದರು.

ನಂತರ ಶಾಸಕ ರಾಜಶೇಖರ ಪಾಟೀಲ ಮಾತನಾಡಿ, ಪುರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ ಮತ್ತು ಸದಸ್ಯರು ಪಟ್ಟಣದ ಅಭಿವೃದ್ಧಿಗಾಗಿ ಪಕ್ಷ ಭೇದ ಮರೆತು ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡಬೇಕು ಎಂದರು.

ಕಳೆದ 25 ವರ್ಷಗಳಿಂದ ಪಟ್ಟಣದ ಜನರು ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಹೆಚ್ಚಿನ ಬೆಂಬಲ ನೀಡುತ್ತಾ ಬಂದಿದ್ದಾರೆ. ಸದಸ್ಯರು ನಿತ್ಯ ವಾರ್ಡ್‍ಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕು ಎಂದರು.

ಪುರಸಭೆಯ ಅಡಳಿತ ವೈಖರಿ ಉತ್ತಮವಾಗಿರಬೇಕು ಪ್ರತಿಯೊಂದು ಕಾಮಗಾರಿಯು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಂಡು ಬಂದರೆ ಮುಲಾಜಿಲ್ಲದೆ, ಅಧಿಕಾರಿಗಳು ಮತ್ತು ಸದಸ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುವುದು ಎಂದು ತಿಳಿಸಿದರು.

ಕೊರೊನಾ ವಾಹಳಿ ಮತ್ತು ಅತಿವೃಷ್ಟಿಯಿಂದಾಗಿ ಬಡ ಜನರು ಸಾಕಷ್ಟು ತೊಂದರೆಯಲ್ಲಿದ್ದಾರೆ. ಚುನಾಯಿತ ಪ್ರತಿನಿಧಿಗಳು ಜನರ ಕಷ್ಟದಲ್ಲಿ ಭಾಗಿಯಾಗಿ, ಅವರ ಸಮಸ್ಯೆಗೆ ಸ್ಪಂದಿಸುವಂತಹ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ, ಅರವಿಂದ ಅರಳಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಮೇಶ ಡಾಕುಳಗಿ, ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪಾ ದಾನಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ಪುರಸಭೆ ಸದಸ್ಯರಾದ ಅಫ್ಸರಮಿಯ್ಯ, ಸುನಿಲ್ ಪಾಟೀಲ, ನೀತು ಶರ್ಮಾ, ಅನಿಲ್ ಪಲ್ಲೆರಿ, ವಿಜಯಕುಮಾರ ದುರ್ಗದ, ರಮೇಶ ಕಲ್ಲೂರು, ವಿಜಯಕುಮಾರ ಭಾಸಪಳ್ಳಿ, ಅಬ್ದುಲ್ ರಹೇಮಾನ ಗೊರೆಮಿಯ್ಯ, ವೀರೇಶ ಸೀಗಿ, ಸೈಯದ ಅಬ್ದುಲ್ ಬಾಸೀತ, ಸವಿತಾ ಅಶೋಕ, ಮುಕ್ರಮಜಾ, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ವ್ಯವಸ್ಥಾಪಕ ಶರಣಪ್ಪಾ, ಸಿಬಂದ್ದಿಗಳಾದ ಜಾವೇದ, ಈಶ್ವರ, ಸೈಯದ ಖಾನ್, ಪೈಜುಲ್ಲಾ ಖಾನ್, ಶಾಮದಾಸ, ಸಲೀಂಮತ್ತು ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT