ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾರಿಗೆ ಸಂಸ್ಥೆಯಲ್ಲಿ ಅವ್ಯವಹಾರ ಆರೋಪ; ಕ್ರಮಕ್ಕೆ ಒತ್ತಾಯ

Published 11 ಆಗಸ್ಟ್ 2024, 16:12 IST
Last Updated 11 ಆಗಸ್ಟ್ 2024, 16:12 IST
ಅಕ್ಷರ ಗಾತ್ರ

ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್ ಘಟಕ, ಹುಮನಾಬಾದ್, ಬಸವಕಲ್ಯಾಣ ಮತ್ತು ಭಾಲ್ಕಿ ಘಟಕಗಳಲ್ಲಿ ಅವ್ಯವಹಾರ ಆಗಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ ಸಂಘದ ಒಕ್ಕೂಟದಿಂದ ಬೀದರ್ ಘಟಕ ನಿಯಂತ್ರಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬೀದರ್ ಘಟಕದ ಹಣಕಾಸು ಶಾಖೆಯಲ್ಲಿ ಅಂದಾಜು ₹79 ಲಕ್ಷ ಚೆಚ್ಚದಲ್ಲಿ ಹುಮನಾಬಾದ್ ಘಟಕದಲ್ಲಿ ವಿದ್ಯಾರ್ಥಿಗಳ ಪಾಸ್ ಹಣ ದುರುಪಯೋಗ, ಭಾಲ್ಕಿಯಲ್ಲಿ ಇಂಧನ ಶಾಖೆಯಲ್ಲಿ ಎರಡು ಸಲ ಇಂಧನ ಕಳವು, ಬಸವಕಲ್ಯಾಣ ಘಟಕದಲ್ಲಿ ಬ್ಯಾಂಕಿಗೆ ಕಟ್ಟಬೇಕಾಗಿರುವ ₹17 ಲಕ್ಷ ದುರುಪಯೋಗ ಎಂದು ಆರೋಪಿಸಿದ ಅವರು ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕೆಲವು ಅಧಿಕಾರಿಗಳು ಬೀದರ್ ಕೇಂದ್ರ ಕಚೇರಿಯಲ್ಲಿ ಕಳೆದ 20 ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ . ಇಂತಹ ಅಧಿಕಾರಿ, ಸಿಬ್ಬಂದಿ ಮತ್ತು ವಿಭಾಗೀಯ ಎಲ್ಲ ಕಚೇರಿಗಳಲ್ಲಿ 3 ವರ್ಷಕ್ಕಿಂತ ಹೆಚ್ಚು ಅವಧಿಯ ಸೇವೆ ಸಲ್ಲಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಕೊಂಡು ತಕ್ಷಣವೇ ಬೇರೆ ಸ್ಥಳಗಳಿಗೆ ವರ್ಗಾವಣೆ ಮಾಡಿ ಸಂಸ್ಥೆ ಸುಧಾರಣೆಗೆ ಒತ್ತು ನೀಡಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಜಾನಸನ್ ಜನವಾಡಕರ, ಪ್ರಧಾನ ಕಾರ್ಯದರ್ಶಿ ಗುಂಡಪ್ಪ ವಲ್ಲೂರೆ, ಮಲ್ಲಿಕಾರ್ಜುನ ಪಾಟೀಲ, ಧನಶೆಟ್ಟಿ ಮಮದಾಪುರ, ಗಣಪತಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT