ಗುರುವಾರ , ಡಿಸೆಂಬರ್ 1, 2022
20 °C

ಹುಮನಾಬಾದ್: ಪಿಎಫ್ಐ, ಎಸ್ಡಿಪಿಐ ಮುಖಂಡರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಮನಾಬಾದ್: ಪೊಲೀಸರು ಪಿಎಫ್ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ‌

ಎರಡು ತಂಡಗಳನ್ನು ರಚಿಸಿ ದಾಳಿ ನಡೆಸಿದ ಪೊಲೀಸರು ಬೆಳಗಿನ ಜಾವ ಪಿಎಫ್ಐ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಕರೀಂ ಹಾಗೂ ಎಸ್‌ಡಿಪಿಐ ಸಂಘಟನೆಯ ಜಿಲ್ಲಾ ಘಟಕದ ಕಾರ್ಯದರ್ಶಿ ಶೇಖ್ ಮಕ್ಸೂದ್ ಅವರನ್ನು ಬಂಧಿಸಿದರು.

ಬಳಿಕ ತಹಶೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರ ಮಾರ್ಗದರ್ಶನದಲ್ಲಿ ಎಸಿಪಿ ಶಿವಾಂಶು ರಾಜಪೂತ್, ಸಿಪಿಐ ಶರಣಬಸಪ್ಪ ಕೋಡ್ಲಾ, ಪಿಎಸ್ಐ ಮಂಜನಗೌಡ ಪಾಟೀಲ ಹಾಗೂ ಸಿಬ್ಬಂದಿ ಇದ್ದ ತಂಡಗಳು ದಾಳಿ ನಡೆಸಿವೆ.

ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.