ಹುಮನಾಬಾದ್: ಶಾಲಾವಾಹನ ಚಾಲಕರಿಗೆ ಸೂಕ್ತ ಚಾಲನಾ ಪರವಾನಗಿ, ಅನುಭವ ಹಾಗೂ ಮಕ್ಕಳೊಂದಿಗೆ ಸ್ನೇಹಪರ ವರ್ತನಿಂದ ಇರಬೇಕು ಎಂದು ಡಿವೈಎಸ್ಪಿ ಮಡೋಳಪ್ಪ ಪಿ.ಎಸ್. ಸಲಹೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಶಾಲಾ ಕಾಲೇಜು ವಾಹನಗಳನ್ನು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಕಡ್ಡಾಯವಾಗಿ ಶಾಲಾ ವಾಹನಗಳು ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಪ್ರತಿಯೊಂದು ಶಾಲಾ ಬಸ್ಗಳಲ್ಲಿ ಅಗತ್ಯ ದಾಖಲೆಗಳು, ವಾಹನದ ತಾಂತ್ರಿಕ ಸ್ಥಿತಿ, ನಿಯಮಿತ ಫಿಟ್ನೆಸ್ ಪ್ರಮಾಣಪತ್ರ, ವೇಗ ನಿಯಂತ್ರಕ ಸಾಧನ, ಅಗ್ನಿಶಾಮಕ ಉಪಕರಣಗಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ತುರ್ತು ನಿರ್ಗಮನ ವ್ಯವಸ್ಥೆ ಕಡ್ಡಾಯವಾಗಿರಬೇಕು’ ಎಂದು ಹೇಳಿದರು.

‘ಮಕ್ಕಳು ಏರುವಾಗ ಮತ್ತು ಇಳಿಯುವಾಗ ಸಂದರ್ಭದಲ್ಲಿ ಸಮಸ್ಯೆ ಆಗದಂತೆ ಶಾಲಾ ಬಸ್ಗಳಲ್ಲಿ ನಿರೀಕ್ಷಕರೊಬ್ಬರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಬೇಕು. ಅತಿವೇಗ, ಮದ್ಯಪಾನ ಸೇವಿಸಿ ಚಾಲನೆ ಮಾಡಬಾರದು. ಶಿಕ್ಷಣ ಸಂಸ್ಥೆಗಳ ಮಾಲೀಕರು ತಮ್ಮ ವಾಹನಗಳಲ್ಲಿ ಸಾರಿಗೆ ವ್ಯವಸ್ಥೆಯಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಶಾಲಾ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸಿಪಿಐ ಸಂತೋಷ ತಟ್ಟೆಪಳ್ಳಿ, ಸಂಚಾರಿ ಪಿಎಸ್ಐ ಹುಲೇಪ್ಪ, ಸಿಬ್ಬಂದಿ ರಾಜು ಬಿರಾದಾರ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.