ಹುಮನಾಬಾದ್: ಕೇಕ್ ತಿಂದು ಜ್ವರ, ವಾಂತಿ, ಭೇದಿ ಕಾಣಿಸಿಕೊಂಡು ಒಂದೇ ಗ್ರಾಮದ ಸುಮಾರು 29ಕ್ಕು ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಲ್ಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಣಕುಣಿ ಗ್ರಾಮದ 29 ಜನರು ಶನಿವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಜನ್ಮದಿನದಲ್ಲಿ ಭಾಗವಹಿಸಿ ಕೇಕ್ ತಿಂದು ಮಕ್ಕಳು, ಹಿರಿಯರಿಗೆ ವಾಂತಿ ಭೇದಿ, ತಲೆ ಸುತ್ತುವುದು ಕಾಣಿಸಿಕೊಂಡಾಗ ತಕ್ಷಣ ಹುಮನಾಬಾದ್ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಿದ ನಂತರ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮದಲ್ಲಿ ಈ ರೀತಿ ಘಟನೆ ನಡೆದಿರುವುದು ಗಮನಕ್ಕೆ ಬಂದ ತಕ್ಷಣ ಗ್ರಾಮಕ್ಕೆ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಿ ಮಾಹಿತಿ ಪಡೆಯಲು ಸೂಚಿಸಲಾಗಿದೆ. ಆಹಾರದಲ್ಲಿ ವ್ಯತ್ಯಾಸ ಉಂಟಾಗಿ ಜನ ಅಸ್ವಸ್ಥರಾಗಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಶಿವಕುಮಾರ್ ಸಿದ್ದೇಶ್ವರ ತಿಳಿಸಿದ್ದಾರೆ.

ಭೇಟಿ : ಹಣಕುಣಿ ಗ್ರಾಮದ ಜನರು ಕೇಕ್ ತಿಂದು ಅಸ್ವಸ್ಥರಾದ ಘಟನೆ ತಿಳಿದು ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಇಲ್ಲಿಯ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ನಂತರ ಮಾತನಾಡಿದ ಅವರು, ‘ಕೇಕ್ ತಿಂದು ಅಸ್ತವ್ಯಸ್ತರಾಗಿದ್ದಾರೆ. ಭಯ ಪಡುವ ಅಗತ್ಯವಿಲ್ಲ. ಸದ್ಯ ಎಲ್ಲರೂ ಆರೋಗ್ಯವಾಗಿದ್ದಾರೆ. ಹೆಚ್ಚಿನ ನಿಗಾ ವಹಿಸುವಂತೆ ವೈದ್ಯರಿಗೆ ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-33-591180580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.