ಹುಮನಾಬಾದ್: ‘ಗ್ರಾಹಕರ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ. ಗ್ರಾಹಕರು ತಮ್ಮ ಹಕ್ಕುಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು’ ಎಂದು ಜೆ.ಎಂ.ಎಫ್.ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಸಣ್ಣ ಹನುಮಗೌಡ ಹೇಳಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಹುಮನಾಬಾದ್ ವಕೀಲರ ಸಂಘ, ಕಂದಾಯ ಇಲಾಖೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿಯುವುದು ಪ್ರತಿಯೊಬ್ಬರಿಗೂ ಅವಶ್ಯ. ಮಾರಾಟಗಾರರಿಂದ ಆಗುವ ವಂಚನೆಯಿಂದ ತಪ್ಪಿಸಿಕೊಳ್ಳಲು ಏನು ಮಾಡಬೇಕು ಎಂಬುದು ಸೇರಿದಂತೆ ಬೇರೆ ಬೇರೆ ವಿಷಯ ತಿಳಿಯುವುದು ಸೇರಿದಂತೆ ಜನಜಾಗೃತಿಗಾಗಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ’ ಎಂದರು.

ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿರ್ದೇಶಕಿ ಸವಿತಾ, ಆಡಳಿತಾಧಿಕಾರಿ ಪರಮೇಶ್ವರಿ ಫುಲೇಕರ್, ಸರ್ಕಾರಿ ಸಹಾಯಕ ಅಭಿಯೋಜಕ ರವಿಕುಮಾರ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ವಿಜಯಕುಮಾರ ಜೋತಗೊಂಡ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ ನಾತೆ, ವೆಂಕಟರಾವ್, ಸಲಮಾನ್ ಅಲಿ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-33-1855319885

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.