ಹುಮನಾಬಾದ್: ತಾಲ್ಲೂಕಿನ ಡಾಕುಳಗಿ ಗ್ರಾಮದ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ಜರುಗಿತು.

ಬೇಮಳಖೇಡ ಹಿರೇಮಠ ಸಂಸ್ಥಾನದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಪ್ರತಿ ವರ್ಷ ಅದ್ದೂರಿಯ ಪಲ್ಲಕ್ಕಿ ಉತ್ಸವದ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಜಾತ್ರೆ ಪರಿಪೂರ್ಣವಾಗಿ ಆಚರಣೆ ಆಗಬೇಕು ಎಂದರೆ ಪಲ್ಲಕ್ಕಿ ಉತ್ಸವದ ಜೊತೆಗೆ ಮಹಾರಥೋತ್ಸವ ಸಹ ನಡೆಸಬೇಕು. ಹೀಗಾಗಿ ಬರುವ ವರ್ಷ ಜಾತ್ರೆಯಲ್ಲಿ ನೂತನ ಮಹಾರಥೋತ್ಸವವನ್ನು ನೆರವೇರಿಸಬೇಕು’ ಎಂದು ತಿಳಿಸಿದರು.

‘ದೀಪಾವಳಿಯ ನಂತರ ಕಾರ್ತಿಕ ಮಾಸದಲ್ಲಿ ನೂತನ ಮಹರಥೋತ್ಸವ ನಿರ್ಮಾಣಕ್ಕೆ ಚಾಲನೆಯನ್ನು ನೀಡಲಾಗುವುದು. ರಥದ ಕಾಣಿಕೆಯನ್ನು ಗ್ರಾಮಸ್ಥರು ಮತ್ತು ಭಕ್ತ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಶಿವಾನಂದ ಸ್ವಾಮಿ, ಸಂಜು ಕುಮಾರ, ಷಣ್ಮುಖಯ್ಯ, ವೀರೇಶ್ ಸ್ವಾಮಿ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-33-1838604098

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.