ಹುಮನಾಬಾದ್: ‘ನಿಮ್ಮ ಶಿಷ್ಟಾಚಾರದ ಪದ್ಧತಿ ಭಾಲ್ಕಿ, ಬೀದರ್ ಕ್ಷೇತ್ರಕ್ಕೂ ಅನ್ವಯವಾಗಬೇಕು. ಬರಿ ಹುಮನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ’ ಎಂದು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ ಅವರು ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಪಾಟೀಲ, ಭೀಮರಾವ್ ಪಾಟೀಲ ವಿರುದ್ಧ ವಾಗ್ದಾಳಿ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಇಲ್ಲಿಯ ಎಸ್.ಬಿ. ಐ. ಬ್ಯಾಂಕ್ವರೆಗೆ 10 ಕೋಟಿ ವೆಚ್ಚದಲ್ಲಿನ ರಸ್ತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈಶಾನ್ಯ ಪದವೀಧರ ಕ್ಷೇತ್ರ ಮತ್ತು ಸ್ಥಳೀಯ ಸಂಸ್ಥೆಗಳ ಪರಿಷತ್ ಸದಸ್ಯರು ಹುಮನಾಬಾದ್ನಲ್ಲಿ ಮಾತ್ರ ಶಿಷ್ಟಾಚಾರವನ್ನು ಪದೇ ಪದೇ ಕೇಳುತ್ತಾರೆ. ಈ ನಿಮ್ಮ ಶಿಷ್ಟಾಚಾರದ ಪ್ರೀತಿ ಭಾಲ್ಕಿ ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಿಗೆ ಅನ್ವಯವಾಗಬೇಕು’ ಎಂದರು.

‘2023ರ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ ಎಂದು ಹೇಳುತ್ತೀರಿ. ಹುಮನಾಬಾದ್ ವಿಧಾನಸಭಾ ಕ್ಷೇತ್ರಕ್ಕೆ ಎಷ್ಟು ವಿಶೇಷ ಅನುದಾನ ತಂದಿದ್ದೀರಿ ಎಂದು ಬಹಿರಂಗ ಪಡಿಸಬೇಕು. ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಏಕೆ ಮಾಡುತ್ತಿದ್ದೀರಿ. ಶಾಸಕ, ವಿಧಾನ ಪರಿಷತ್ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಕ್ಷೇತ್ರ ಅಭಿವೃದ್ಧಿ ಆಗಲು ಸಾಧ್ಯವಿದೆ’ ಎಂದು ಹೇಳಿದರು.

‘ನಾನು ಶಾಸಕನಾಗಿ ಆಯ್ಕೆಯಾಗಿ ಎರಡು ವರ್ಷ ಆಯಿತು. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಇದ್ದ ಸಂದರ್ಭದಲ್ಲಿ ಈ ರಸ್ತೆ ಅಭಿವೃದ್ಧಿಗಾಗಿ ₹ 10 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದರು. ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರು ಕೇಂದ್ರ ಸರ್ಕಾರದಿಂದ ಅನೇಕ ಅನುದಾನವನ್ನು ತಂದು ತಾಲ್ಲೂಕಿನ ಧುಮ್ಮನಸೂರದಿಂದ ಹುಮನಾಬಾದ್ ಪಟ್ಟಣಕ್ಕೆ ಸಂಪರ್ಕ ರಸ್ತೆ, ಬೀದರ್ ನಿಂದ ಹುಮನಾಬಾದ್ವರೆಗೆ ರಾಷ್ಟೀಯ ಹೆದ್ದಾರಿ 55 ರಸ್ತೆ ನಿರ್ಮಾಣ ಮಾಡಿರುವುದು ಶ್ಲಾಘನೀಯವಾಗಿದೆ’ ಎಂದರು.

ಈ ಸಂದರ್ಭದಲ್ಲಿ ಬಸವರಾಜ ಆರ್ಯ, ವಿಶ್ವನಾಥ ಪಾಟೀಲ, ಅಭಿಮನ್ಯು ನಿರಗುಡೆ, ಸಂತೋಷ್ ಪಾಟೀಲ, ಪುರಸಭೆ ಸದಸ್ಯರಾದ ರಮೇಶ್ ಕಲ್ಲೂರ್, ವಿಜಯಕುಮಾರ್ ದುರ್ಗಾದ, ಧನಲಕ್ಷ್ಮಿ, ಲೋಕೋಪಯೋಗಿ ಇಲಾಖೆ ಎಇಇ ಧನರಾಜ ಚೌಹಾಣ್ ಸೇರಿದಂತೆ ಇತರರು ಇದ್ದರು.

‘ಅಭಿವೃದ್ಧಿ ಕಾಮಗಾರಿಗೆ ಸಾಥ್ ನೀಡಿ’

‘ಈಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಂದ ₹ 161 ಕೋಟಿ ವೆಚ್ಚದ ಅಮೃತ ಯೋಜನೆ ಚಾಲನೆ ಸಂದರ್ಭದಲ್ಲಿ ಕಾಂಗ್ರೆಸ್ನ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಒಬ್ಬ ಸದಸ್ಯರು ಸಹ ಭಾಗವಹಿಸಲಿಲ್ಲ. ಇವತ್ತು ಸಹ ಯಾರೂ ಬಂದಿಲ್ಲಾ ಏಕೆ’ ಎಂದು ಶಾಸಕ ಡಾ .ಸಿದ್ದಲಿಂಗಪ್ಪ ಪಾಟೀಲ ಪ್ರಶ್ನಿಸಿದರು.

‘ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮ ನಡೆಯಬೇಕು ಎಂದು ಹೇಳುತ್ತಾರೆ. ಈಗ ಶಿಷ್ಟಾಚಾರದ ಪ್ರಕಾರವೇ ಕಾರ್ಯಕ್ರಮ ಮಾಡಿದರೂ ವಿಧಾನ ಪರಿಷತ್ ಸದಸ್ಯರು ಹಾಗೂ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ಭಾಗವಹಿಸದೇ ಇರುವುದು ಸರಿಯಲ್ಲ. ಕ್ಷೇತ್ರದ ಅಭಿವೃದ್ಧಿಗಾಗಿ ರಾಜಕೀಯ ಬಿಟ್ಟು ಪಕ್ಷಾತೀತವಾಗಿ ಕೆಲಸ ಮಾಡಬೇಕು. ಆದರೆ ಇವರು ಬರೀ ರಾಜಕೀಯ ಮಾಡುತ್ತಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.