ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

70–80 ಮಿ.ಮೀ ಮಳೆಯಾದರೆ ಬಿತ್ತನೆ ಮಾಡಿ: ಗೌತಮ್

Published 29 ಮೇ 2024, 14:39 IST
Last Updated 29 ಮೇ 2024, 14:39 IST
ಅಕ್ಷರ ಗಾತ್ರ

ಹುಮನಾಬಾದ್: ‘ಬಿತ್ತನೆ ಬೀಜಕ್ಕಾಗಿ ರೈತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗೌತಮ್ ಹೇಳಿದರು.

ತಾಲ್ಲೂಕಿನ ದುಬಲಗುಂಡಿ, ಹಳ್ಳಿಖೇಡ್ ಬಿ. ಪಟ್ಟಣದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಬಳಿಕ ಮಾತನಾಡಿದ ಅವರು, ‘ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಸುಮಾರು 14 ಸಾವಿರ ಕ್ವಿಂಟಾಲ್ ಸೋಯಾ ಸೇರಿದಂತೆ ಉದ್ದು, ಹೆಸರು, ತೊಗರಿ, ಜೋಳ ಇದೆ. ಹೆಚ್ಚಿನ ಬೇಡಿಕೆ ಬಂದರೆ ತರಿಸಲಾಗುವುದು’ ಎಂದರು. 

ಹಳ್ಳಿಖೇಡ್ ಬಿ.ರೈತ ಸಂಪರ್ಕ ಕೇಂದ್ರದ ಅಧಿಕಾರಿ ಕೈಲಾಸನಾಥ ಮಚಕುರಿ ಮಾತನಾಡಿ, ‘ರೈತರಿಗೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಮುಂಚಿತವಾಗಿ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿದೆ. 70–80ಮಿ.ಮೀ ಮಳೆಯಾದರೆ ಮಾತ್ರ ಬಿತ್ತನೆ ಮಾಡಬೇಕು. ಹವಾಮಾನ ಇಲಾಖೆಯ ಪ್ರಕಾರ ಜೂನ್ 1–3ರ ವರೆಗೆ ಮಳೆ ಬರುವ ಸಾಧ್ಯತೆ ಇದೆ‌’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT