ಶೀಘ್ರ ಮುಖ್ಯಮಂತ್ರಿ ಬಳಿ ನಿಯೋಗ

7
ಹೈದರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಆಗ್ರಹ

ಶೀಘ್ರ ಮುಖ್ಯಮಂತ್ರಿ ಬಳಿ ನಿಯೋಗ

Published:
Updated:
Deccan Herald

ಬೀದರ್: ‘ಸಂವಿಧಾನದ ತಿದ್ದುಪಡಿಯ 371(ಜೆ) ವಿಶೇಷ ಸ್ಥಾನಮಾನದ ಅನುಷ್ಠಾನಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಗೊಂದಲಗಳನ್ನು ನಿವಾರಿಸುವಂತೆ ಒತ್ತಾಯಿಸಿ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳ ಪ್ರತಿನಿಧಿಗಳ ನೇತೃತ್ವದ ನಿಯೋಗವು ಆಗಸ್ಟ್‌ 15ರ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿಗೆ ತೆರಳಲಿದೆ’ ಎಂದು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ತಿಳಿಸಿದರು.

‘ಹೈದರಾಬಾದ್ ಕರ್ನಾಟಕದ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು ಕುಮಾರಸ್ವಾಮಿ ಅವರೊಂದಿಗೆ ಸುಧೀರ್ಘ ಚರ್ಚೆ ನಡೆಸುವರು’ ಎಂದು ಅವರು ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಈವರೆಗೂ ಹೈ–ಕ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ. ಸರ್ಕಾರಿ ಹುದ್ದೆಗಳ ನೇಮಕಾತಿಯ ಸಂದರ್ಭದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಕೊಟ್ಟಿಲ್ಲ’ ಎಂದು ದೂರಿದರು.

‘ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು. ಕೇಂದ್ರ ಸರ್ಕಾರ ಹೈದರಾಬಾದ್‌ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಗೆ ಕನಿಷ್ಠ ₹ 2,000 ಕೋಟಿ ಬಿಡುಗಡೆ ಮಾಡಬೇಕು’ ಎಂದು ಒತ್ತಾಸಿದರು.

‘ರಾಜ್ಯಪಾಲರ ಅಧ್ಯಕ್ಷೆತೆಯಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. 371(ಜೆ) ಸಂಬಂಧಿಸಿದ ಉಪ ಸಮಿತಿಗೆ ಹೈದರಾಬಾದ್‌ ಕರ್ನಾಟಕದ ಸಚಿವರನ್ನೇ ನೇಮಿಸಬೇಕು’ ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಕೀಲ ಅಶೋಕ ಮಾನೂರೆ, ದೇವೇಂದ್ರ ಕಮಲ, ಶಂಕರಪ್ಪ ಹೊನ್ನಾ ಇದ್ದರು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !