ಬುಧವಾರ, ಜುಲೈ 6, 2022
22 °C

ಈದ್ಗಾ ಮೈದಾನ: ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕರ್ನಾಟಕ ಉರ್ದು ಅಕಾಡೆಮಿಯ ಅಧ್ಯಕ್ಷ ಮುಬಿನ್ ಮುನವರ್ ಸೋಮವಾರ ಇಲ್ಲಿಯ ಕೇಂದ್ರ ಬಸ್ ನಿಲ್ದಾಣ ಹತ್ತಿರದ ಈದ್ಗಾ ಮೈದಾನಕ್ಕೆ ಭೇಟಿ ಕೊಟ್ಟು ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಈದ್ಗಾ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ಡಯಾಲಸಿಸ್ ಕೇಂದ್ರದ ಕಾಮಗಾರಿಯ ವೀಕ್ಷಣೆ ಮಾಡಿದರು.

ಈದ್ಗಾ ಮೈದಾನದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಬಗೆಗೆ ಈದ್ಗಾ ಕಮಿಟಿಯ ಅಧ್ಯಕ್ಷ ಅಹಮ್ಮದ್ ಸೇಠ್ ಮಾಹಿತಿ ನೀಡಿದರು.

ಈದ್ಗಾ ಮೈದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಖ್ಯಮಂತ್ರಿಯವರೂ ಆಶ್ವಾಸನೆ ನೀಡಿದ್ದಾರೆ. ಶೀಘ್ರ ಅನುದಾನ ಒದಗಿಸಲು ಸರ್ಕಾರದ ಮೇಲೆ ಒತ್ತಡ ಹೇರಿದರೆ ಕಾಮಗಾರಿ ಬೇಗ ಆರಂಭಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಬಿನ್ ಮುನವರ್, ಸಾಧ್ಯವಾದ ಎಲ್ಲ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಉರ್ದು ಅಕಾಡೆಮಿಯ ಸದಸ್ಯರಾದ ಶಾಹೇದ್ ಖಾಜಿ, ನಿಸಾರ್ ಅಹಮ್ಮದ್, ಸಾಜೀದ್ ಪಾಶಾ, ಈದ್ಗಾ ಕಮಿಟಿಯ ಪದಾಧಿಕಾರಿಗಳಾದ ನಿಸಾರ್ ಅಹಮ್ಮದ್, ಮಹಮ್ಮದ್ ಅಮೇರ್, ಮುಬಾಸಿರ್ ಶಿಂಧೆ, ಉರ್ದು ಅಕಾಡೆಮಿಯ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು