ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರು ಅನ್ಯಾಯವಾದರೆ ಪ್ರತಿಭಟಿಸಿ ನ್ಯಾಯ ಪಡೆಯಿರಿ

ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭು ಬಡಿಗೇರ ಹೇಳಿಕೆ
Last Updated 24 ಮಾರ್ಚ್ 2023, 15:24 IST
ಅಕ್ಷರ ಗಾತ್ರ

ಬೀದರ್‌: ‘ಗ್ರಾಹಕರಿಗೆ ಅನ್ಯಾಯವಾದರೆ ಅದನ್ನು ಸಹಿಸದೇ ನ್ಯಾಯಯುತವಾಗಿ ಪ್ರತಿಭಟಿಸುವ ಮೂಲಕ ನ್ಯಾಯ ಪಡೆಯಲು ಪ್ರಯತ್ನಿಸಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಭು ಬಡಿಗೇರ ಹೇಳಿದರು.

ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ-2023ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿಯೇ 1986ರಲ್ಲಿ ಗ್ರಾಹಕರ ಹಕ್ಕುಗಳ ರಕ್ಷಣೆ ಕಾಯ್ದೆ ಬಂದಿದೆ. ಮೋಸ ಹೋದ ಗ್ರಾಹಕರು

ನ್ಯಾಯಾಲಯದ ಮುಖಾಂತರ ಪರಿಹಾರ ಪಡೆಯಬಹುದಾಗಿದೆ’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಮಾತನಾಡಿ, ಪ್ರತಿ ವರ್ಷ ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸಿಕೊಂಡು ಬರಲಾಗಿದೆ. ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಗ್ರಾಹಕರ ಪರಿಷತ್ ಸದಸ್ಯ ಬಸವರಾಜ ಪವಾರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಕವಿತಾ ಹುಷಾರೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಾಬುಸಾಹೇಬ ಛಬ್ಬಿ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತ ಅಧಿಕಾರಿ ಸಿದ್ದಮ್ಮ ಹಂಗರಗಿ ಮಾತನಾಡಿದರು.

ಗ್ರಾಹಕರ ಚಟುವಟಿಕೆಗಳ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಕಲಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಶ್ರೀಕಾಂತ, ಶಿವಾಜಿ ವೈಜನಾಥ, ವೈಷ್ಣವಿ ದೇಶಪಾಂಡೆ ಅವರಿಗೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ, ರಾಹುಲ್ ಕುಲಕರ್ಣಿ ಮತ್ತು ಜಿ.ವನಿತಾ ಅವರಿಗೆ ಸಮಾಧಾನಕರ ಬಹಗುನಾನ ನೀಡಲಾಯಿತು.

ಜಿಲ್ಲಾ ಗ್ರಾಹಕರ ಪರಿಷತ್ ಸದಸ್ಯ ಬಿ.ಜಿ.ಶೆಟಕಾರ್, ಜಿಲ್ಲಾ ಗ್ರಾಹಕರ ಪರಿಷತ್ ಸದಸ್ಯರಾದ ಮಹೇಶ ಪಾಲಂ, ಕೆ.ಎಫ್.ಸಿ.ಎಸ್.ಸಿ. ಜಿಲ್ಲಾ ವ್ಯವಸ್ಥಾಪಕ ವಿನೋದ, ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಾಜು ಸೂರ್ಯನ, ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಇಲಾಖೆಯ ಜಿಲ್ಲಾ ಅಂಕಿತ ಅಧಿಕಾರಿ ಡಾ.ನಿತೀನ್ ಬಿರಾದಾರ ಇದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT