ಸೋಮವಾರ, ಸೆಪ್ಟೆಂಬರ್ 28, 2020
24 °C

ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 100 ಕ್ವಿಂಟಲ್ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಸವಕಲ್ಯಾಣ: ತಾಲ್ಲೂಕಿನ ಉಜಳಂಬದಲ್ಲಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ 100 ಕ್ವಿಂಟಲ್ ಅಕ್ಕಿಯನ್ನು ಇಲ್ಲಿನ ಆಹಾರ ಇಲಾಖೆ ಅಧಿಕಾರಿಗಳು ಈಚೆಗೆ ವಶಪಡಿಸಿಕೊಂಡಿದ್ದಾರೆ.

ಕಲಬುರ್ಗಿಯಿಂದ ಉಮರ್ಗಾಕ್ಕೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಲಾರಿಯಲ್ಲಿ ₹2.70 ಲಕ್ಷ ಮೌಲ್ಯದ 200 ಚೀಲ ಅಕ್ಕಿ ಇತ್ತು. ಲಾರಿ ಸಮೇತ ಅಕ್ಕಿಯನ್ನು ಆಹಾರ ನಿರೀಕ್ಷಕ ರಾಜೇಂದ್ರ ಅವರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಮಂಠಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು