ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಡಾಬಾಗಳಲ್ಲಿ ಅಕ್ರಮ ಮದ್ಯ ಮಾರಾಟ: ಆರೋಪ

Published 11 ಜನವರಿ 2024, 6:32 IST
Last Updated 11 ಜನವರಿ 2024, 6:32 IST
ಅಕ್ಷರ ಗಾತ್ರ

ಬೀದರ್‌: ‘ನಗರದ ಸುತ್ತಮುತ್ತಲಿನ ಡಾಬಾಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಕರ್ನಾಟಕ ಮಾದಾರ ಚನ್ನಯ್ಯಾ ಹೋರಾಟ ಸಮಿತಿ ಅಧ್ಯಕ್ಷ ರಮೇಶ ಕಟ್ಟಿತೂಗಾಂವ ಆರೋಪಿಸಿದ್ದಾರೆ.

ಈ ಸಂಬಂಧ ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಮದ್ಯ ಮಾರಾಟ ಮಳಿಗೆಯವರಿಗೆ ಮದ್ಯ ಮಾರಾಟಕ್ಕಷ್ಟೇ ಅನುಮತಿ ಇದೆ. ಆದರೆ, ಜನರಿಗೆ ಆಸನಗಳ ವ್ಯವಸ್ಥೆ ಮಾಡಿ ಮದ್ಯ ಸೇವನೆಗೆ ಅವಕಾಶ ಕಲ್ಪಿಸುತ್ತಿದ್ದಾರೆ. ಇದು ಕಾನೂನುಬಾಹಿರ ಕೃತ್ಯ. ಅವರ ವಿರುದ್ಧವೂ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT