ಮಂಗಳವಾರ, ಅಕ್ಟೋಬರ್ 19, 2021
23 °C

ಐಎಂಎ ನೂತನ ಪದಾಧಿಕಾರಿಗಳ ಪದಗ್ರಹಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಭಾರತೀಯ ವೈದ್ಯಕೀಯ ಸಂಘ(ಐಎಎಂ)ದ ಬೀದರ್ ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಲ್ಲಿಯ ಜೆಸ್ಕಾಂ ಕಚೇರಿ ಹತ್ತಿರದ ಐಎಂಎ ಹಾಲ್‍ನಲ್ಲಿ ನಡೆಯಿತು.

ಸಂಘದ ಚಟುವಟಿಕೆಗಳಿಗೆ ತಮ್ಮ ಸಹಕಾರ ಸದಾ ಇರಲಿದೆ ಎಂದು ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ ಹೇಳಿದರು.

ಬ್ರಿಮ್ಸ್ ನಿರ್ದೇಶಕ ಡಾ. ಚಂದ್ರಕಾಂತ ಚಿಲ್ಲರ್ಗಿ, ಸಂಘದ ನೂತನ ಅಧ್ಯಕ್ಷ ಡಾ. ವಿನೋದ ಸಾವಳಗಿ ಮಾತನಾಡಿದರು.

ಸಂಘದ ಉಪಾಧ್ಯಕ್ಷರಾದ ಡಾ. ರಾಜಶೇಖರ ಸೇಡಂಕರ್, ಡಾ. ಪಲ್ಲವಿ ಮಠಪತಿ, ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಎಮ್ಮೆ, ಖಜಾಂಚಿ ಡಾ. ಮಹೇಶ ತೊಂಡಾರೆ, ನಿಕಟಪೂರ್ವ ಅಧ್ಯಕ್ಷ ವಿ.ವಿ. ನಾಗರಾಜ, ನಿಕಟಪೂರ್ವ ಕಾರ್ಯದರ್ಶಿ ಡಾ. ಸತೀಶ ಮುಡಬಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.