ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಿ: ಅನಿಲಕುಮಾರ ಮೇಲ್ದೊಡ್ಡಿ

ಬೀದರ್: ಕನ್ನಡಿಗರೆಲ್ಲರೂ ಕನ್ನಡ ಭಾಷೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಬೀದರ್ ತಾಲ್ಲೂಕು ಸಹಾಯಕ ನಿರ್ದೇಶಕ ಅನಿಲಕುಮಾರ ಮೇಲ್ದೊಡ್ಡಿ ಹೇಳಿದರು.
ಇಲ್ಲಿಯ ಪ್ರತಾಪನಗರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡ ನಾಡು, ನುಡಿ, ಸಂಸ್ಕøತಿಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕಂಕಣಬದ್ಧರಾಗಬೇಕು ಎಂದು ನುಡಿದರು.
ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನದ ಮೂಲಕ ರಾಜ್ಯ ಸರ್ಕಾರ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಿದೆ ಎಂದು ತಿಳಿಸಿದರು.
ಕಚೇರಿ ಅಧೀಕ್ಷಕ ರಮೇಶ ಗೋಖಲೆ, ಪ್ರಥಮ ದರ್ಜೆ ಸಹಾಯಕಿ ಮಹಾದೇವಿ, ದ್ವಿತೀಯ ದರ್ಜೆ ಸಹಾಯಕರಾದ ರತನ್ ಸಿಂಗ್, ಅಂಬಾದಾಸ, ಬೆರಳಚ್ಚುಗಾರ್ತಿ ಅನಿತಾ, ಹಣಮಂತ, ಸ್ವಾಮಿದಾಸ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.