ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಶಿಕ್ಷಣ ನೀತಿಯಿಂದ ಸುಧಾರಣೆ

ಗುವಿವಿ ಕುಲಪತಿ ದಯಾನಂದ ಅಗಸರ ಅಭಿಮತ
Last Updated 7 ಮಾರ್ಚ್ 2021, 3:40 IST
ಅಕ್ಷರ ಗಾತ್ರ

ಬೀದರ್: ‘ರಾಷ್ಟ್ರೀಯ ಶಿಕ್ಷಣ ನೀತಿ-2020 ಇದು ಉತ್ತಮ ಗುಣಮಟ್ಟದ ಶಿಕ್ಷಣ, ಮೇಕ್ ಇನ್ ಇಂಡಿಯಾ ನಿರ್ಮಾಣಕ್ಕೆ ಸಹಕಾರಿಯಾಗಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ದಯಾನಂದ ಅಗಸರ ಹೇಳಿದರು.

ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಕರ್ನಾಟಕ ಕಲಾ ವಾಣಿಜ್ಯ ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

‘ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣನವರ ವಿಚಾರಧಾರೆಗಳನ್ನು ಪರಿಗಣನೆಗೆ ತೆಗೆದುಕೊಂಡು ಶಿಕ್ಷಣ ನೀತಿ ರೂಪಿಸಲಾಗಿದೆ’ ಎಂದರು.

‘ವಯಸ್ಕರ ಶಿಕ್ಷಣ, ನಿರಂತರ ಕಲಿಕೆ, ಭಾಷಾ ಬೆಳವಣಿಗೆ, ಕಲೆ, ಸಂಸ್ಕೃತಿ ಮೇಲ್ದರ್ಜೇಗೆ ಏರಿಸಲಾಗಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇಂದಿನ ಶಿಕ್ಷಣ ಸಂಸ್ಥೆಗಳು ಅಳವಡಿಸಿಕೊಂಡು ನವಭಾರತವನ್ನು ನಿರ್ಮಾಣ ಮಾಡಬಹುದು’ ಎಂದು ತಿಳಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಪ್ರತಿಭಾ ಚಾಮಾ ಮಾತನಾಡಿ, ‘1968, 1986 ಕ್ಕಿಂತ 2020ರ ರಾಷ್ಟ್ರೀಯ ಶಿಕ್ಷಣ ನೀತಿ ಉತ್ತಮವಾಗಿದೆ. ಇಲ್ಲಿ ಮಗುವನ್ನು 6 ವರ್ಷ ಬದಲು 3 ವರ್ಷಕ್ಕೆ ಶಾಲೆಗೆ ದಾಖಲಿಸಲು ತಿಳಿಸಲಾಗಿದೆ. ವಿದ್ಯಾರ್ಥಿ ಗಳು ತಮಗೆ ಬೇಕಾದ ವಿಷಯ ಗಳನ್ನು ಆರಿಸಿಕೊಂಡು ಅಧ್ಯಯನ ಮಾಡಲು ಅವಕಾಶ ನೀಡಲಾಗಿದೆ’ ಎಂದರು.

ಸಿಂಡಿಕೇಟ್ ಸದಸ್ಯ ಬಸವರಾಜ ಯಾದವಾಡ, ಬಿವಿಬಿ ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಸಾತನೂರ, ಕರ್ನಾಟಕ ರಾಜ್ಯ ಐಸಿಟಿ ಅಕಾಡೆಮಿ ಮುಖ್ಯಸ್ಥರಾದ ಡಿ.ವಿಷ್ಣುಪ್ರಸಾದ ಮಾತನಾಡಿದರು.

ಗುಡಿವಾಡಾ ಎಎನ್‍ಆ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್.ಶಂಕರ, ಕ.ರಾ.ಶಿ.ಸಂಸ್ಥೆಯ ಅಧ್ಯಕ್ಷ ಡಾ.ಬಸವರಾಜ ಪಾಟೀಲ, ಜಗನ್ನಾಥ ಹೆಬ್ಬಾಳೆ, ಮಲ್ಲಿಕಾರ್ಜುನ ಹಂಗರಗಿ, ಟಿ.ಮೃಣಾಲಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT