ಮಂಗಳವಾರ, ಆಗಸ್ಟ್ 16, 2022
20 °C
ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿಕೆ

ಪೀರ್ ಪಾಶಾ ದರ್ಗಾದಲ್ಲಿ ಅನುಭವ ಮಂಟಪದ ಸಾಕ್ಷ್ಯಗಳಿಲ್ಲ: ಬಸವಲಿಂಗ ಪಟ್ಟದ್ದೇವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಬಸವಕಲ್ಯಾಣದಲ್ಲಿರುವ ಪೀರ್ ಪಾಶಾ ದರ್ಗಾದಲ್ಲಿ ಅನುಭವ ಮಂಟಪವಿದ್ದ ಬಗ್ಗೆ ಸಾಕ್ಷ್ಯಗಳಿಲ್ಲ. ಬಸವಣ್ಣನವರ ಬಗ್ಗೆ ಇರುವ ಹತ್ತಾರು ಗ್ರಂಥಗಳಲ್ಲೂ ಇದರ ಉಲ್ಲೇಖವಿಲ್ಲ’ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸ್ಪಷ್ಟಪಡಿಸಿದ್ದಾರೆ.

ಬಸವಕಲ್ಯಾಣದ ಪೀರ್ ಪಾಶಾ ದರ್ಗಾ 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪವಾಗಿತ್ತು ಎಂಬ ವಿಷಯ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

‘ಅನುಭವ ಮಂಟಪ ಸಾಧಾರಣ ಕಟ್ಟಡವಾಗಿರಬಹುದು. ಇತಿಹಾಸಕಾರರು ಸಂಶೋಧನೆ ಮಾಡಿದರೆ ಮಾತ್ರ ಸತ್ಯಾಂಶ ತಿಳಿಯಲು ಸಾಧ್ಯ. ಆದರೆ, ದರ್ಗಾದಲ್ಲಿ ಅನುಭವ ಮಂಟಪದ ಕುರುಹಗಳಿರುವ ಅಂಶ ಎಲ್ಲಿಯೂ ಉಲ್ಲೇಖವಾಗಿಲ್ಲ’ ಎಂದು ತಿಳಿಸಿದ್ದಾರೆ.

ಬಸವಣ್ಣನ ಕರ್ಮಭೂಮಿ ಬಸವಕಲ್ಯಾಣದಲ್ಲೂ ಮಸೀದಿ ವಿವಾದ: ಅನುಭವ ಮಂಟಪದ ಕುರುಹು ಪತ್ತೆ

‘ಬಸವಣ್ಣನವರು ಸ್ಥಾವರಕ್ಕೆ ಮಹತ್ವ ಕೊಟ್ಟಿರಲಿಲ್ಲ. ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂಬುದು ಅವರ ಸಿದ್ಧಾಂತ. ಈ ದೃಷ್ಟಿಕೋನದಿಂದ ನೋಡಿದರೆ ಅವರ ಅನುಭವ ಮಂಟಪ ಬಹುತೇಕ ಸಾಧಾರಣ ಕಟ್ಟಡ ಅಥವಾ ಹೆಂಚಿನ ಮನೆಯೂ ಇರಬಹುದು. ಕಾಲಾನುಕ್ರಮದಲ್ಲಿ ಅದು ನಶಿಸಿರಬಹುದು. ಪೀರ್ ಪಾಶಾ ದರ್ಗಾ ಅನುಭವ ಮಂಟಪ ಆಗಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು