ಸೋಮವಾರ, ಅಕ್ಟೋಬರ್ 18, 2021
25 °C

ಬೀದರ್: ಗುದಗೆ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಉದ್ಘಾಟನೆ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಗುದಗೆ ಆಸ್ಪತ್ರೆಯಲ್ಲಿ ಕ್ಯಾಥ್ ಲ್ಯಾಬ್ ಉದ್ಘಾಟನಾ ಸಮಾರಂಭ ಶನಿವಾರ (ಸೆ.18) ಸಂಜೆ 5ಕ್ಕೆ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಫಾರ್‍ಟಿಸ್ ಆಸ್ಪತ್ರೆಯ ಡಾ. ವಿವೇಕ ಜವಳಿ, ಶಾಸಕರಾದ ಈಶ್ವರ ಖಂಡ್ರೆ, ರಾಜಶೇಖರ ಬಿ. ಪಾಟೀಲ, ಅತಿಥಿಗಳಾಗಿ ಶಾಸಕರಾದ ರಹೀಂಖಾನ್, ಬಂಡೆಪ್ಪ ಕಾಶೆಂಪೂರ ಪಾಲ್ಗೊಳ್ಳುವರು.

ವಿಶೇಷ ಆಮಂತ್ರಿತರಾಗಿ ಎನ್.ಬಿ. ರೆಡ್ಡಿ ಗುರೂಜಿ, ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ, ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸೂಪರ್ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಹಾಗೂ ಕೆ.ಆರ್.ಇ ಸಂಸ್ಥೆ ಅಧ್ಯಕ್ಷ ಡಾ. ಬಸವರಾಜ ಪಾಟೀಲ ಅಷ್ಟೂರ ಭಾಗವಹಿಸುವರು ಎಂದು ಗುದಗೆ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಚಂದ್ರಕಾಂತ ಗುದಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.