ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕಾ ಕೇಂದ್ರ ಉದ್ಘಾಟನೆ

ಗುರುನಾನಕ ಸಂಸ್ಥೆ ಸಿಬ್ಬಂದಿಗೆ ಕೋವಿಡ್ ಲಸಿಕೆ ಉಚಿತ
Last Updated 2 ಮಾರ್ಚ್ 2021, 4:40 IST
ಅಕ್ಷರ ಗಾತ್ರ

ಬೀದರ್: ಗುರುನಾನಕ ಶಿಕ್ಷಣ ಸಂಸ್ಥೆ ಹಾಗೂ ಗುರುದ್ವಾರ ಸಿಬ್ಬಂದಿಗೆ ಕೋವಿಡ್ ಲಸಿಕೆ ಉಚಿತವಾಗಿ ಕೊಡಲಾಗುವುದು ಎಂದು ಗುರುನಾನಕ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷೆ ರೇಷ್ಮಾ ಕೌರ್ ಘೋಷಿಸಿದರು.

ಇಲ್ಲಿಯ ಗುರುನಾನಕ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಕೋವಿಡ್ ಲಸಿಕಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ರೋಗಿಗಳು ಚಿಕಿತ್ಸೆಗಾಗಿ ನೆರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಲು ಗುರುನಾನಕ ಆಸ್ಪತ್ರೆಯಲ್ಲಿ ಡಯಾಲಸಿಸ್ ಕೇಂದ್ರ, ಕ್ಯಾಟ್ ಲ್ಯಾಬ್ ಸೇರಿದಂತೆ ಅಗತ್ಯ ಅತ್ಯಾಧುನಿಕ ವೈದ್ಯಕೀಯ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಮಾರ್ಚ್ 3 ರಂದು ನ್ಯೂರೊ ಟ್ರಾಮಾ ಕೇರ್ ಸೆಂಟರ್ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಕೋವಿಡ್ ಸಂಪೂರ್ಣ ತೊಲಗುವವರೆಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೇಂದ್ರವನ್ನು ಉದ್ಘಾಟಿಸಿದ ಶಾಸಕ ರಹೀಂಖಾನ್ ತಿಳಿಸಿದರು.

ಸಾರ್ವಜನಿಕರು ಆಸ್ಪತ್ರೆಯಲ್ಲಿ ಆರಂಭಿಸಿರುವ ಲಸಿಕಾ ಕೇಂದ್ರ ಹಾಗೂ ನಿಗಾ ಘಟಕದ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಬೀದರ್ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ ತೊಡಲಾಗಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮನವಿ ಮಾಡಿದರು.

ಬೀದರ್‌ನಲ್ಲಿ ಎರಡು ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಲಸಿಕಾ ಕೇಂದ್ರಗಳನ್ನಾಗಿ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಗುರುನಾನಕ ಆಸ್ಪತ್ರೆ ಒಂದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ ಹೇಳಿದರು.

ಗುರುನಾನಕ್ ಝೀರಾ ಫೌಂಡೇಶನ್ ಅಧ್ಯಕ್ಷ ಡಾ. ಬಲಬೀರ್ ಸಿಂಗ್ ಅವರು ಮೊದಲ ಲಸಿಕೆ ಪಡೆದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ನಿಶಾ ಕೌರ್, ಡಾ. ಲಿಂಗರಾಜ ಕಡಾಡಿ, ಡಾ. ಕೊರವಾರ್, ಆರ್‌ಎಚ್‍ಒ ಡಾ. ಮಹೇಶ ಬಿರಾದಾರ್ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT