ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ: ಎಸ್‍ಎಫ್‍ಐ ವಿರೋಧ

Last Updated 24 ಫೆಬ್ರುವರಿ 2021, 14:14 IST
ಅಕ್ಷರ ಗಾತ್ರ

ಬೀದರ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನಕ್ಕೆ ₹2.5 ಲಕ್ಷದ ಆದಾಯ ಮಿತಿ ಹಾಕಿರುವುದಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ವಿರೋಧ ವ್ಯಕ್ತಪಡಿಸಿದೆ.

ಆದಾಯ ಮಿತಿಯ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಕರ್ಯಗಳಿಂದ ವಂಚಿತರಾಗಲಿದ್ದಾರೆ. ಸಾಮಾಜಿಕ, ಆರ್ಥಿಕ ಹಿಂದುಳಿಯುವಿಕೆ ಹಾಗೂ ಜೀವನ ನಿರ್ವವಣೆ ವೆಚ್ಚವನ್ನು ವಿದ್ಯಾರ್ಥಿ ವೇತನಕ್ಕೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ ಒತ್ತಾಯಿಸಿದ್ದಾರೆ.

ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಫೆಲೋಶಿಪ್ ಹಣದಲ್ಲಿ ಶೇ 70 ರಷ್ಟು ಕಡಿತ ಮಾಡಿದ ಬೆನ್ನಲ್ಲೇ, ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ ಹಾಕಲಾಗಿದೆ. ಆದಾಯ ಮಿತಿಯನ್ನು ಕೂಡಲೇ ಕೈಬಿಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT