ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಡಯಾಲಿಸಿಸ್‌ ಕೇಂದ್ರ ಹೆಚ್ಚಳಕ್ಕೆ ಅಧಿವೇಶನದಲ್ಲಿ ಬೆಲ್ದಾಳೆ ಆಗ್ರಹ

Published 7 ಡಿಸೆಂಬರ್ 2023, 15:54 IST
Last Updated 7 ಡಿಸೆಂಬರ್ 2023, 15:54 IST
ಅಕ್ಷರ ಗಾತ್ರ

ಬೀದರ್‌: ‘ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್‌ ಸೌಕರ್ಯ ಸೂಕ್ತ ಪ್ರಮಾಣದಲ್ಲಿ ಇಲ್ಲದೆ ಇರುವುದರಿಂದ ರೋಗಿಗಳು ಪರದಾಟ ನಡೆಸುತ್ತಿದ್ದಾರೆ. ಕೂಡಲೇ ಡಯಾಲಿಸಿಸ್‌ ಕೇಂದ್ರಗಳ ಸಂಖ್ಯೆ ಹೆಚ್ಚಿಸಬೇಕು’ ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಆಗ್ರಹಿಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಅವರು, ಒತ್ತಡದ ಬದುಕಿನಿಂದ ಜನರಲ್ಲಿ ಡಯಾಲಿಸಿಸ್ ಸಮಸ್ಯೆ ಹೆಚ್ಚಾಗುತ್ತಿದೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ದುಬಾರಿ ಹಣ ತೆತ್ತು ಖಾಸಗಿ ಆಸ್ಪತ್ರೆಗಳಲ್ಲಿ ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಯಕ್ಕೆ ಡಯಾಲಿಸಿಸ್‌ ಮಾಡಿಸಿಕೊಳ್ಳದಿದ್ದರೆ ಬಹಳ ಸಮಸ್ಯೆ ಎದುರಿಸಬೇಕಾಗುತ್ತದೆ. ಇದನ್ನೆಲ್ಲ ಮನಗಂಡು ಸಮಸ್ಯೆ ಬಗೆಹರಿಸಬೇಕೆಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಮನವಿ ಮಾಡಿದರು.

ಚಿಟಗುಪ್ಪ ಹಾಗೂ ಮನ್ನಾಏಖೆಳ್ಳಿ ಆರೋಗ್ಯ ಕೇಂದ್ರಗಳಿಗೂ ಹೆಚ್ಚು ರೋಗಿಗಳು ಬಂದು ಹೋಗುತ್ತಾರೆ. ಅಲ್ಲೂ ಡಯಾಲಿಸಿಸ್‌ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT