ದೇಶದಲ್ಲಿ ಹೆಚ್ಚಿದ ಭಯೋತ್ಪಾದನೆ

7
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪ

ದೇಶದಲ್ಲಿ ಹೆಚ್ಚಿದ ಭಯೋತ್ಪಾದನೆ

Published:
Updated:
Deccan Herald

ಬೀದರ್: ‘ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ದೇಶದಲ್ಲಿ ಭಯೋತ್ಪಾದನೆ ಹೆಚ್ಚಿದೆ. ಬಿಜೆಪಿ, ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳಲೂ ಹಿಂಜರಿಯುತ್ತಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.

‘ಜಮ್ಮು ಕಾಶ್ಮೀರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆಸ್ಸಾಂನಲ್ಲಿ ಎನ್‌ಆರ್‌ಸಿ ಪ್ರಕರಣದ ಮೂಲಕ ಕೋಮುವಾದಕ್ಕೆ ಎಡೆ ಮಾಡಿಕೊಡಲಾಗುತ್ತಿದೆ. ದಲಿತರು, ಅಲ್ಪಸಂಖ್ಯಾತರು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ’ ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಆಪಾದಿಸಿದರು.

‘ಯುಪಿಎ ಅವಧಿಯಲ್ಲಿ ಲೋಕಪಾಲ ಮಸೂದೆ ಜಾರಿಗೆ ಬಂದರೂ ಎನ್‌ಡಿಎ ಸರ್ಕಾರ ಕನಿಷ್ಠ ಲೋಕಪಾಲರನ್ನು ನೇಮಕ ಮಾಡಿಲ್ಲ. ಬ್ಯಾಂಕ್‌ ಲೂಟಿಕೋರರಿಗೆ ರಕ್ಷಣೆ ಒದಗಿಸುತ್ತಿದೆ. ಸಂಸತ್ತಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನೇರ ವಾಗ್ದಾಳಿ ಮಾಡಿದರೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಕೊಟ್ಟಿಲ್ಲ’ ಎಂದು ತಿಳಿಸಿದರು.

‘ರಫೆಲ್‌ ಯುದ್ಧ ವಿಮಾನ ಖರೀದಿಗೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎನ್ನುವ ಮಾಹಿತಿ ನೀಡುತ್ತಿಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ನಿಗದಿಯಾಗಿದ್ದ ಬೆಲೆಯ ಮೂರುಪಟ್ಟು ಬೆಲೆಯಲ್ಲಿ ಯುದ್ಧ ವಿಮಾನ ಖರೀದಿಸಲಾಗಿದೆ. ಈ ಮೂಲಕ ಆಪ್ತರಿಗೆ ಲಾಭ ಮಾಡಿಕೊಡಲಾಗಿದೆ’ ಎಂದು ದೂರಿದರು.

‘ರಾಹುಲ್‌ ಗಾಂಧಿ ಅವರು ಆಗಸ್ಟ್‌ 13 ರಂದು ಬೀದರ್‌ನಲ್ಲಿ ಆಯೋಜಿಸಿರುವ ಜನಧ್ವನಿ ವೇದಿಕೆ ಕಾರ್ಯಕ್ರಮದಲ್ಲಿ ಮಾತ್ರ ಪಾಲ್ಗೊಳ್ಳಲಿದ್ದಾರೆ. ನಂತರ ಇಲ್ಲಿಂದ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !