ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯ ವಿವಿಧೆಡೆ ಸ್ವಾತಂತ್ಯ ಸಂಭ್ರಮ

Last Updated 15 ಆಗಸ್ಟ್ 2021, 13:37 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯಲ್ಲಿ ವಿವಿಧೆಡೆ ಭಾನುವಾರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಕೋವಿಡ್‌ ಕಾರಣ ಸರಳವಾಗಿ ನಡೆಯಿತು.

ಭಗತ್‌ಸಿಂಗ್‌ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಹೀಂ ಖಾನ್‌, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸುನೀಲ್‌ ಕಡ್ಡೆ, ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ ಇದ್ದರು.

ಕೆಪಿ ವಿದ್ಯಾ ಸಂಸ್ಥೆ: ನಗರದ ಕೆ.ಪಿ ವಿದ್ಯಾಸಂಸ್ಥೆಯಲ್ಲಿ ಅಧ್ಯಕ್ಷ ಬಾಬು ವಾಲಿ ಧ್ವಜಾರೋಹಣ ನೆರವೇರಿಸಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ, ಹಾವಶೆಟ್ಟಿ ಪಾಟೀಲ, ಸಂಸ್ಥೆಯ ಉಪಾಧ್ಯಕ್ಷ ಮಲ್ಲಯ್ಯ ಸ್ವಾಮಿ, ಚಂದ್ರಶೇಖರ ಪಾಟೀಲ, ಸಂತೋಷ ಬಾಲೋಡೆ ಇದ್ದರು. ಕನ್ನಕಾ ಪರಮೇಶ್ವರಿ ಹಿರಿಯ ಪ್ರಾಥಮಿಕ ಪ್ರೌಢ ಹಾಗೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ವಿಜಯಕುಮಾರ ಪಾಟೀಲ ಸ್ವಾಗತಿಸಿದರು.

ಎಂ.ಬಿ.ಶಿಕ್ಷಣ ಸಂಸ್ಥೆ: ಶಿವಾಜಿ ನಗರದಲ್ಲಿರುವ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆಯ ಡಿ. ದೇವರಾಜ ಅರಸು ಶಿಕ್ಷಕರ ತರಬೇತಿ ಕೇಂದ್ರ, ಕವಿರತ್ನ ಕಾಳಿದಾಸ ಪದವಿ ಕಾಲೇಜ್, ಮಾತೋಶ್ರೀ ಅಹೀಲ್ಯಾಬಾಯಿ ಹೋಳ್ಕರ್ ಪ್ರೌಢ ಶಾಲೆ ಮತ್ತು ಏಕಲವ್ಯ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಸಂಸ್ಥೆಯ ಆವರಣದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಮಹಾತ್ಮ ಗಾಂಧೀಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು, ನಂತರ ರಾಷ್ಟ್ರ ಧ್ವಜಾರೋಹಣ ಮಾಡಿದರು. ಅವಿನಾಶ ಎ. ಚಿಮಕೋಡೆ, ಶಾಲಾ-ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

ವಿಶ್ವ ಕನ್ನಡಿಗರ ಸಂಸ್ಥೆ: ನಗರದ ಡಾ.ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಸಂಸ್ಥೆಯ ರಾಜ್ಯ ಘಟಕದ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಡಾ.ಬಿ ಆರ್.ಅಂಬೇಡ್ಕರ್ ಭವನದ ಅಧ್ಯಕ್ಷ ಪವನ ಮಿಠಾರ ಪಾಲ್ಗೊಂಡಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಕಮಠಾಣ: ಬೀದರ್ ತಾಲ್ಲೂಕಿನ ಕಮಠಾಣಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ 75ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ವೈದ್ಯಾಧಿಕಾರಿ ಡಾ.ರೇಣುಕಾ ಜಾಧವ್ ಧ್ವಜಾರೋಹಣ ನೆರವೇರಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.

ಸಹಕಾರಿಗಳ ಒಕ್ಕೂಟ: ಬೀದರ್ ಜಿಲ್ಲಾ ಸೌಹಾರ್ದ ಸಹಕಾರಿಗಳ ಒಕ್ಕೂಟದ ಕಚೇರಿ ಆವರಣದಲ್ಲಿ ಒಕ್ಕೂಟದ ಅಧ್ಯಕ್ಷ ಗುರುನಾಥ ಜ್ಯಾಂತಿಕರ್ ದ್ವಜಾರೋಹಣ ನೇರವೆರಿಸಿದರು.

ಒಕ್ಕೂಟದ ಉಪಾಧ್ಯಕ್ಷ ಸಂಜೀವಕುಮಾರ ಪಾಟೀಲ. ನಿರ್ದೇಶಕ ಸಂಜಯ ಕ್ಯಾಸಾ, ಶ್ರೀಕಾಂತ ಸ್ವಾಮಿ ಸೋಲಪುರ, ರಾಜಶೇಖರ ನಾಗಮೂರ್ತಿ, ಮುಖ್ಯ ಕಾರ್ಯನಿರ್ವಾಹಕ ಅಮೃತ್ ಹೊಸಮನಿ, ಜಿಲ್ಲಾ ಸಂಯೋಜಕ ವೀರಶಟ್ಟಿ ಶಿವರಾಜ ಹೂಗಾರ, ಅನಿಲ್ ಕೊಡಂಬಲ್, ಹಿರಿಯ ಸಹಕಾರಿ ಅಣ್ಣಾರಾವ್ ನಾವದಗೇರಿ, ಸಂಜೀವ್ ಶಿವಾನಂದ ರಾಹುಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT