‘ಯುವಜನರಲ್ಲಿ ದೇಶಭಕ್ತಿ ಮೂಡಿಸಿ’

ಹುಮನಾಬಾದ್: ‘ಯುವ ಜನರಲ್ಲಿ ದೇಶಭಕ್ತಿ ಮೂಡುವಂತೆ ಪಾಲಕರು ಮತ್ತು ಇಲಾಖೆಗಳು ಪ್ರಯತ್ನಿಸ ಬೇಕು’ ಎಂದು ಹಿರೇಮಠ ಸಂಸ್ಥಾನದ ರೇಣುಕವೀರಗಂಗಾಧರ ಶಿವಾಚಾರ್ಯರು ತಿಳಿಸಿದರು.
ಪಟ್ಟಣದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಮಾತನಾಡಿ, ‘ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಜಿಲ್ಲಾಧಿಕಾರಿ ಅವರ ಆದೇಶದಂತೆ ಒಟ್ಟು 12 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಬೀದರ್ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವುದು. ದೇಶಕ್ಕಾಗಿ ಹೋರಾಡಿದ ಯೋಧರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.
ಮಲ್ಲಿಕಾರ್ಜುನ ಪಿ. ಮಾಳಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜ್ಞಾನದೇವ ಕೆ.ಧುಮಾಳೆ ಹಾಗೂ ತಂಡ ದೇಶಭಕ್ತಿ ಗೀತೆ ಮತ್ತು ಸುಗಮ ಸಂಗೀತ ನಡೆಸಿಕೊಟ್ಟರು. ಜನಾರ್ಧನ ವಾಘಮಾರೆ ತಬಲಾ ಸಾಥ್ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ರವಿಕಿರಣ ನೆಳಗೆ, ಗುರುಶಾಂತ ಮಾವುರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.