ಔರಾದ್: ಉಗ್ರರ ವಿರುದ್ಧ ಹೋರಾಡುತ್ತಿರುವ ಭಾರತೀಯ ಸೈನಿಕರಿಗೆ ದೇವರು ಇನ್ನಷ್ಟು ಶಕ್ತಿ ಕೊಡಲಿ ಎಂದು ಪ್ರಾರ್ಥಿಸಿ ಅಮರೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.

ಶಾಸಕ ಪ್ರಭು ಚವಾಣ್ ಹಾಗೂ ಸ್ಥಳೀಯ ಮುಖಂಡರು ಉದ್ಭವಲಿಂಗ ಅಮರೇಶ್ವರನಿಗೆ ಶಲ್ಯ ತೊಡಿಸಿ ಕಾಯಿ ಒಡೆದು ಪ್ರಾರ್ಥಿಸಿದರು.

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ದೇಶದ ಗೌರವ ಹೆಚ್ಚಿಸಿರುವ ಭಾರತೀಯ ಸೈನಿಕರ ಬಗ್ಗೆ ತುಂಬಾ ಹೆಮ್ಮೆ ಇದೆ. ನಮ್ಮ ಸೈನಿಕರ ಶಕ್ತಿ ಎಂತಹದ್ದು ಎಂಬುದು ಉಗ್ರರಿಗೆ ಚೆನ್ನಾಗಿ ಗೊತ್ತಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ದಲ್ಲಿ ಉಗ್ರರ ದಾಳಿಯಿಂದ ಹತ್ಯೆಯಾದವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು. ಮುಖಂಡ ರಾಮಶೆಟ್ಟಿ ಪನ್ನಾಳೆ, ಧೊಂಡಿಬಾ ನರೋಟೆ, ಶಿವರಾಜ ಅಲ್ಮಾಜೆ, ದಯಾನಂದ ಘೂಳೆ, ಕೇರಬಾ ಪವಾರ್, ವೀರೇಶ ಅಲ್ಮಾಜೆ, ಖಂಡೋಬಾ ಕಂಗಟೆ, ಎಂ.ಡಿ ಸಲಾವುದ್ದಿನ್, ಮಹಾದೇವ ಅಲ್ಮಾಜೆ, ಶಿವಾಜಿ ಬೋಗಾರ್, ಸಂದೀಪ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.