ಸೋಮವಾರ, ಸೆಪ್ಟೆಂಬರ್ 20, 2021
22 °C

ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆ: ಸಚಿವರಿಂದ ಸಕಾರಾತ್ಮಕ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ರಾಸಾಯನಿಕ ಹಾಗೂ ರಸಗೊಬ್ಬರ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆಗೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯ ಶಾಂತಕುಮಾರ ಮುದಾಳೆ ತಿಳಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ಪ್ರಯುಕ್ತ ನವದೆಹಲಿಯಲ್ಲಿ ನಿಯೋಗದಲ್ಲಿ ಅವರಿಗೆ ಶುಭ ಕೋರಿ, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವ ದಿಸೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ಕೊಡಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಖೂಬಾ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರ, ಕಲ್ಯಾಣ ಕರ್ನಾಟಕ ಹಾಗೂ ರಾಜ್ಯಕ್ಕೆ ಮಹತ್ವದ ಕೊಡುಗೆಗಳನ್ನು ಕೊಡಲಿದ್ದಾರೆ ಎಂದು ಕೃಷಿಕ ಸಮಾಜದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ದಂಗಾಪುರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖಂಡ ಬಸವರಾಜ ಮಾಡಗಿ ಇದ್ದರು. ನಂತರ ನಿಯೋಗದ ಸದಸ್ಯರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು