ಶನಿವಾರ, ಜೂನ್ 19, 2021
27 °C

ಮಾಹಿತಿ ಶಿಕ್ಷಣ ಸಂವಹನ ವಿಡಿಯೊ ವಾಹನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ವಿಡಿಯೊ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿ.ಜಿ.ರೆಡ್ಡಿ ಚಾಲನೆ ನೀಡಿದರು.

ಜಿಲ್ಲಾ ಪಂಚಾಯಿತಿ ಒದಗಿಸಿರುವ ವಿಡಿಯೊ ವಾಹನವು ಮಾಹಿತಿ ಶಿಕ್ಷಣ ಸಂವಹನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಪ್ರದರ್ಶಿಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಂಗಪ್ಪ ಕಾಂಬಳೆ ಮಾತನಾಡಿ, ದೃಶ್ಯ ಮಾಧ್ಯಮವು ಪರಿಣಾಮಕಾರಿ ಮಾಹಿತಿ ಶಿಕ್ಷಣ ಸಂವಹನದ ಮಾಧ್ಯಮವಾಗಿದೆ. ಬೀದರ್ ಜಿಲ್ಲೆಯ ಸಾರ್ವಜನಿಕರಿಗೆ ಆರೋಗ್ಯ ಕಾರ್ಯಕ್ರಮ ಹಾಗೂ ಲಭ್ಯ ಸೇವೆಗಳನ್ನು ತಲುಪಿಸಲು ಅನುಕೂಲಕರವಾಗಿದೆ. ರಾಜ್ಯದಲ್ಲಿಯೇ ಐಇಸಿ ವಿಭಾಗಕ್ಕೆ ಪ್ರಪ್ರಥಮ ವಿಡಿಯೊ ವಾಹನ ಲಭಿಸಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣರೆಡ್ಡಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ರಾಜಶೇಖರ ಪಾಟೀಲ, ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಡಾ.ಸಂತೋಷ ಕಾಳೆ, ಸಹಾಯಕ ಆಡಳಿತ ಅಧಿಕಾರಿ ಅನುಸೂಯಾ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರಾವಣ ಜಾಧವ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೌನದಾಸ ಇದ್ದರು.

ಕಿರು ಚಲನಚಿತ್ರ ಪ್ರದರ್ಶನ: ಕೊರೊನಾ ವೈರಾಣು ಕುರಿತ ತಪ್ಪು ಕಲ್ಪನೆಗಳು ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕಿರು ಚಿತ್ರ ಪ್ರದರ್ಶಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.