ಗುರುವಾರ , ಅಕ್ಟೋಬರ್ 21, 2021
24 °C

ಹತ್ತಿಯಲ್ಲಿ ಕೀಟ ನಿರ್ವಹಣೆ: ಚರ್ಚೆ ಕಾರ್ಯಕ್ರಮ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕೃಷಿ ವಿಜ್ಞಾನ ಕೇಂದ್ರವು ಕೃಷಿ ಪಾಠಶಾಲೆ ಸರಣಿಯಲ್ಲಿ ಅ. 2 ರಂದು ಬೆಳಿಗ್ಗೆ 11ಕ್ಕೆ ಆನ್‍ಲೈನ್‍ನಲ್ಲಿ ಹತ್ತಿ ಬೆಳೆಗೆ ಬಾಧಿಸುವ ಕೀಟಗಳು ಹಾಗೂ ನಿರ್ವಹಣೆ ಕುರಿತು ವಿಷಯ ಮಂಡನೆ ಹಾಗೂ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೀಟ ವಿಜ್ಞಾನಿ ಡಾ. ಶಿವಾನಂದ ಜಿ. ಹಂಚಿನಾಳ ಅವರು ಹತ್ತಿ ಬೆಳೆಯಲ್ಲಿ ಕಂಡು ಬರುವ ಕೀಟಗಳು ಹಾಗೂ ಅವುಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ನೀಡಲಿದ್ದಾರೆ.

ಗೂಗಲ್ ಮೀಟ್ ಲಿಂಕ್ meet.google.com/nby-tvup-hic ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು. ಜಿಲ್ಲೆಯ ರೈತರು ಕಾರ್ಯಕ್ರಮದ ಪ್ರಯೋಜನ ಪಡೆಯಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.