ಸೋಮವಾರ, ಜೂನ್ 27, 2022
28 °C

ಬೀದರ್: ಪತ್ರಿಕಾ ಭವನ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿನ ಆನಂದ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಪತ್ರಿಕಾ ಭವನದ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಶನಿವಾರ ಪರಿಶೀಲಿಸಿದರು.

ಕೋವಿಡ್ ಸಂದರ್ಭದಲ್ಲೂ ಭವನದ ಕಾಮಗಾರಿ ಮುಂದುವರಿಸಿರುವ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಜಿ.ಕೆ. ಕನ್‍ಸ್ಟ್ರಕ್ಷನ್ಸ್ ಮಾಲೀಕರ ಕಾರ್ಯವನ್ನು ಶ್ಲಾಘಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕಕುಮಾರ ಕರಂಜಿ ಅವರು ಸಚಿವರನ್ನು ಸನ್ಮಾನಿಸಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಬಿಜೆಪಿ ಮುಖಂಡ ಗುರುನಾಥ ಕೊಳ್ಳೂರ್, ನಗರಸಭೆ ಸದಸ್ಯ ಶಶಿಧರ ಹೊಸಳ್ಳಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಎನ್. ಲಿಂಗರಾಜ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಖಂಡ್ರೆ, ಕಿರಿಯ ಎಂಜಿನಿಯರ್ ಕುಪ್ಪಣ್ಣ, ಜಿ.ಕೆ. ಕನ್‍ಸ್ಟ್ರಕ್ಷನ್ಸ್ ವ್ಯವಸ್ಥಾಪಕ ನಿರ್ದೇಶಕ ಸಚಿನ್ ಕೊಳ್ಳೂರ, ನಾಗಶೆಟ್ಟಿ ಧರಂಪುರ, ಶಿವಕುಮಾರ ಸ್ವಾಮಿ, ಸುನೀಲಕುಮಾರ ಕುಲಕರ್ಣಿ, ಪೃಥ್ವಿರಾಜ್ ಎಸ್, ಶಿವಕುಮಾರ ಸದಲಾಪುರೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.