ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ‘ಬಸ್‌ ನಿಲ್ದಾಣದಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸಿ’

ಜಯ ಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಘಟಕದಿಂದ ಮನವಿ
Last Updated 10 ಮೇ 2022, 4:18 IST
ಅಕ್ಷರ ಗಾತ್ರ

ಹುಮನಾಬಾದ್: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಪರಾಧಗಳನ್ನು ತಡೆಗಟ್ಟಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಇಲ್ಲಿನ ಬಸ್‌ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

ಬಸ್ ನಿಲ್ದಾಣದಲ್ಲಿ ಮೇಲಿಂದ ಮೇಲೆ ಕಳವು ಪ್ರಕರಣಗಳು ನಡೆಯುತ್ತಿವೆ. ಬಸ್ ಹತ್ತುವಾಗ ಹಾಗೂ ಇಳಿಯುವಾಗ ಕಳ್ಳರು ಮಹಿಳೆಯರ ಆಭರಣಗಳನ್ನು ದೋಚಿಕೊಂಡು ಹೋದ ಉದಾಹರಣೆಗಳಿವೆ. ಈಗಿರುವ ಸಿ.ಸಿ ಟಿ.ವಿ ಕ್ಯಾಮೆರಾಗಳಿಂದ ಕಳ್ಳರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಇದರಿಂದ ಜನರಿಗೆ ಸುರಕ್ಷತೆ ಇಲ್ಲದಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಬಸ್ ನಿಲ್ದಾಣದಲ್ಲಿ ಗುಣಮಟ್ಟದ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಈ ಮೂಲಕ ಜನರಿಗೆ ಅನುಕೂಲ ಮಾಡಿಕೊಡಬೇಕು ಅವರು ಎಂದು ಒತ್ತಾಯಿಸಲಾಯಿಸಿದ್ದಾರೆ.

ವೇದಿಕೆಯ ತಾಲ್ಲೂಕು ಘಟಕದ ಉಪಾಧ್ಯಕ್ಷ ಅವಿನಾಶ ಧೂಮಾಳೆ, ತಾಳಮಡಗಿ ಗ್ರಾಮ ಘಟಕದ ಅಧ್ಯಕ್ಷ ಸಜೀಶ ಲಂಬುನೋರ್, ಪ್ರವೀಣ ಗುತ್ತೇದಾರ, ಉಮೇಶ ಕಟ್ಟಿಮನಿ, ಸೋಮು ಡಾಂಗೆ, ಮಹಾದೇವ ಗೌಳಿ, ಸನಿ ಹುಲ್ಲ, ಕರಣ್ ಜನವೀರ, ರಾಜು ಮಾಳಗೆ, ನಿಖಿತ ಆರ್ಯ, ಪ್ರವೀಣ ಬಾಜಿನೋರ, ಅರುಣ ಕಲ್ಲೂರ, ಅಕ್ಷಯ ಗುತ್ತೇದಾರ ಹಾಗೂ ಧನರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT