ಕಮಲನಗರ: ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ‘ನನ್ನ ಮಣ್ಣು -ನನ್ನ ದೇಶ’ ಕಾರ್ಯಕ್ರಮವನ್ನು ಜಾನಪದ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಸಂಗಮೆ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ದೇಶದ ಸಂರಕ್ಷಣೆಗಾಗಿ ತಮ್ಮ ಜೀವವನ್ನು ಅರ್ಪಿಸಲು ಹಿಂಜರಿಯದೆ ಹುತಾತ್ಮರಾದವರ ಸ್ಮರಣಾರ್ಥವಾಗಿ ಯೋಧರ ಶಿಲಾ ಫಲಕಗಳನ್ನು ಸ್ಥಾಪಿಸಿ ದೇಶದ ಗೌರವ ಹೆಚ್ಚಿಸಬೇಕು. ಯುವಕರು ಇಂಥ ಕಾರ್ಯಕ್ಕೆ ಮುಂದಾಗಬೇಕು’ ಎಂದರು.
ಶಿಕ್ಷಕ ಉಮಕಾಂತ ಮಹಾಜನ ಮಾತನಾಡಿದರು.
ಕಮಲನಗರ ಗ್ರಾಮ ಪಂಚಾಯಿತಿ ಸದಸ್ಯರು, ಶಿಕ್ಷಕರು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.