ಬೀದರ್: ‘ಮಹಿಳೆಯರು ಹಾಗೂ ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ನಡೆಯದಂತೆ ನಿಗಾ ವಹಿಸಲು ಗ್ರಾಮ ಮಟ್ಟದಲ್ಲಿ ಸರ್ಕಾರದ ಎಲ್ಲ ನೌಕರಸ್ಥರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಾನಸಿಕ ಅಸ್ವಸ್ಥ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶ
ದಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವಾಧಾರ
ಗೃಹಗಳ ಮೇಲುಸ್ತುವಾರಿ ಸಮಿತಿಯ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

‘ಒಂಟಿಯಾಗಿ ವಾಸ ಮಾಡುತ್ತಿರುವ ಮಹಿಳೆಯರಿಗೆ ರಕ್ಷಣೆ ಒದಗಿಸುವ ದಿಸೆಯಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಅವರಿಂದ ಪೂರ್ಣ ಮಾಹಿತಿ ಪಡೆದು ಸುರಕ್ಷಿತವೆನಿಸಿದ ಸ್ಥಳಕ್ಕೆ ಕಳಿಸುವ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದಲ್ಲಿ ಅನಾಥ ಮಾನಸಿಕ ಅಸ್ವಸ್ಥ ಮಹಿಳೆ ನಾಲ್ಕು ತಿಂಗಳು ಗರ್ಭಿಣಿಯಾಗಿದ್ದಾಳೆ ಎನ್ನುವ ಮಾಹಿತಿ ಇದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಹಾಗೂ ಸ್ವಾಧಾರ ಗೃಹಗಳ ಮೇಲುಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ತಿಪ್ಪಣ್ಣ ಸಿರಸಗಿ ಸಭೆಗೆ ಮಾಹಿತಿ ನೀಡಿದರು.

‘ಮಹಿಳೆ ಮಾನಸಿಕ ಅಸ್ವಸ್ಥಳಾಗಿರುವುದರಿಂದ ದೈಹಿಕ ಹಾಗೂ ಮಾನಸಿಕ ಸ್ಥಿತಿಗತಿಯ ಬಗ್ಗೆ ವೈದ್ಯಕೀಯ ವರದಿ ಪಡೆದು ಮುಂದಿನ ಕ್ರಮ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ನಡೆಯುತ್ತಿರುವ ಸ್ವಾಧಾರ ಗೃಹದಲ್ಲಿ ಪುನರ್ವಸತಿ ಕಲ್ಪಿಸಬೇಕು. ಬಳಿಕ ಮಹಿಳೆಯನ್ನು ಅವಳ ಸ್ವಂತ ಸ್ಥಳಕ್ಕೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ. ಅವರು ಕಾನೂನು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಹೀರಾ ನಸೀಮ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಡಿಎಚ್ಓ ಡಾ.ವಿ.ಜಿ.ರೆಡ್ಡಿ, ಬೀದರ್ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹಾಂತೇಶ ಭಜಂತ್ರಿ, ಪೊಲೀಸ್ ಇಲಾಖೆ, ಸಖಿ ಒನ್ ಸ್ಟಾಫ್ ಸೆಂಟರ್ ಸಿಬ್ಬಂದಿ, ಸ್ವಾಧಾರ ಗೃಹಗಳ ಮೇಲ್ವಿಚಾರಕರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.