ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಿಕ ಶಿಕ್ಷಣ ಅಭಿಯಾನ: ಶೇ 100 ಸಾಧನೆ

ಜಿಲ್ಲಾಧಿಕಾರಿಯಿಂದ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನೆ
Last Updated 8 ಆಗಸ್ಟ್ 2019, 15:35 IST
ಅಕ್ಷರ ಗಾತ್ರ

ಬೀದರ್: ‘ಜಿಲ್ಲೆಯಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಶೇ 100 ರಷ್ಟು ಸಾಧನೆ ಮಾಡಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ಎಚ್.ಸಿ. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ಅವರು ನಡೆಸಿದ ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದರು.

‘ಅಭಿಯಾನದಡಿ 2019-20ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಿಗೆ ಒಟ್ಟು ₹1.39 ಕೋಟಿ ಬಿಡುಗಡೆಯಾಗಿತ್ತು. ಇದರಲ್ಲಿ ಅಲ್ಪಸಂಖ್ಯಾತರಿಗೆ ₹41.85 ಲಕ್ಷ ಒದಗಿಸಲಾಗಿದೆ’ ಎಂದು ಹೇಳಿದರು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಅವಿನಾಶ ಮಾತನಾಡಿ, ‘2018-19ನೇ ಸಾಲಿನಲ್ಲಿ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕಾಗಿ 9,226 ಅರ್ಜಿಗಳು ಬಂದಿದ್ದವು. 546 ವಿದ್ಯಾರ್ಥಿಗಳಿಗೆ ಕೇಂದ್ರದಿಂದ ಶಿಷ್ಯವೇತನ ಮಂಜೂರು ಮಾಡಲಾಗಿದೆ. 7,254 ಅರ್ಜಿಗಳು ಬಾಕಿ ಇವೆ’ ಎಂದು ತಿಳಿಸಿದರು.

‘ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನ ಯೋಜನೆಯಡಿ 2,240 ಅರ್ಜಿಗಳು ಬಂದಿವೆ. 206ಕ್ಕೆ ಮಂಜೂರಾತಿ ನೀಡಿದ್ದು, 1,611 ಬಾಕಿ ಇವೆ. ಎರಡೂ ಯೋಜನೆಗಳ ಅಡಿಯಲ್ಲಿ ಒಟ್ಟು 11,466 ಅರ್ಜಿಗಳು ಬಂದಿವೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿಯ ಡಿಆರ್‌ಡಿಎ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಲೀಡ್ ಬ್ಯಾಂಕ್, ಜಿಲ್ಲಾ ನಗರಾಭಿವೃದ್ಧಿ ಕೋಶ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು.
ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಕೊಡುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT