ಸೋಮವಾರ, ಸೆಪ್ಟೆಂಬರ್ 27, 2021
21 °C
ಬಸವ ದರ್ಶನ ಪ್ರವಚನ ಸಮಾರೋಪದಲ್ಲಿ ಪಟ್ಟದ್ದೇವರ ಹೇಳಿಕೆ

ಪ್ರವಚನದಿಂದ ಅಂತರಂಗ ಪರಿಶುದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪ್ರವಚನಗಳಿಂದ ಅಂತರಂಗ ಪರಿಶುದ್ಧವಾಗುತ್ತದೆ. ಹೃದಯ, ಮನಸ್ಸಿಗೆ ಆನಂದ ದೊರಕುತ್ತದೆ ಎಂದು ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನುಡಿದರು.

ಇಲ್ಲಿಯ ವಿದ್ಯಾನಗರ ಕಾಲೊನಿಯ ಡಾ. ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಬಸವ ದರ್ಶನ ಪ್ರವಚನ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಬಸವಾದಿ ಶರಣರು ಸಂಸಾರದಲ್ಲಿದ್ದುಕೊಂಡು ಆಧ್ಯಾತ್ಮದ ಮಹಾ ಬೆಳಕಲ್ಲಿ ನೆಮ್ಮದಿಯ ಬದುಕು ಸಾಗಿಸಿದ್ದರು. ಅಂತಹ ಬದುಕು ಎಲ್ಲರದ್ದಾಗಬೇಕು ಎಂದು ತಿಳಿಸಿದರು.

ಮಹಾಲಿಂಗ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ ಮಾತನಾಡಿದರು.

ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಶ್ರಾವಣ ಮಾಸ ಸಮಿತಿಯ ಅಧ್ಯಕ್ಷ ನೀಲಕಂಠ ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಡಾ. ದೇವಿಕಾ ನಾಗೂರೆ, ಜಯರಾಜ ಖಂಡ್ರೆ, ಶಾಂತಾ ಖಂಡ್ರೆ, ಪ್ರೊ. ಎಸ್.ಬಿ. ಬಿರಾದಾರ, ಶ್ರೀಕಾಂತ ಬಿರಾದಾರ, ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಉಪಸ್ಥಿತರಿದ್ದರು.

ಪಿ. ಶಶಿಕಲಾ ಬಸವ ಪೂಜೆ ನೆರವೇರಿಸಿದರು. ವಚನಶ್ರೀ, ಚನ್ನಬಸಪ್ಪ ನೌಬಾದೆ ಹಾಗೂ ಸಂಜೀವಕುಮಾರ ಸ್ವಾಮಿ ವಚನ ಗಾಯನ ನಡೆಸಿಕೊಟ್ಟರು. ಯೋಗೇಂದ್ರ ಯದಲಾಪುರೆ ನಿರೂಪಿಸಿದರು. ಪ್ರೊ. ಉಮಾಕಾಂತ ಮೀಸೆ ಸ್ವಾಗತಿಸಿದರು. ಲಕ್ಷ್ಮೀಬಾಯಿ ಬಿರಾದಾರ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.