ಹುಮನಾಬಾದ್: ಬಲಗೈ ಒಳಮೀಸಲಾತಿ ಹೋರಾಟ ಸಮಿತಿಯಿಂದ ಫೆ. 23ರಂದು ಹಮ್ಮಿಕೊಂಡಿರುವ ಹುಮನಾಬಾದ್ ಬಂದ್ಗೆ ವ್ಯಾಪಾರಸ್ಥರು ಬೆಂಬಲ ನೀಡಬೇಕು ಎಂದು ಸಮಿತಿಯ ಪ್ರಮುಖರು ಮನವಿ ಮಾಡಿದರು. ಪಟ್ಟಣದ ಪ್ರಮುಖ ರಸ್ತೆಯಲ್ಲಿನ ಅಂಗಡಿಗಳ ಮಾಲೀಕರನ್ನು ಸಮಿತಿ ಪದಾಧಿಕಾರಿಗಳು ಭೇಟಿಯಾಗಿ ಮನವಿ ಮಾಡಿದರು.

ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ಬಂದ್ಗೆ ಕರೆ ನೀಡಲಾಗಿದೆ. ಒತ್ತಾಯ ಪೂರ್ವಕವಾಗಿ ಬಂದ್ ಮಾಡಬೇಕಾಗಿಲ್ಲ. ಅದರ ಬದಲು ನಮ್ಮ ಸಮಾಜದ ನ್ಯಾಯಯುತ ಬೇಡಿಕೆಗಾಗಿ ನಿಮ್ಮಲ್ಲರ ಸಹಕಾರ ಅಗತ್ಯವಾಗಿದೆ’ ಎಂದು ಹೇಳಿದರು.

ಸಮಿತಿ ಅಧ್ಯಕ್ಷ ಬಾಬು ಟೈಗರ, ಅಂಕುಶ ಗೋಖಲೆ, ಕೆ.ಎಂ.ಗಜೇಂದ್ರ, ದೇವೇಂದ್ರ ಫೋಲಾ, ವೀರಪ್ಪ ಧುಮ್ಮನಸೂರ, ಸುರೇಶ ಘಾಂರೆ, ಮಲ್ಲಿಕಾರ್ಜುನ ಮಹೇಂದ್ರಕರ, ದಿಲೀಪಕುಮಾರ ಮರಪಳ್ಳಿಕರ, ಗಣಪತಿ ಅಷ್ಟೂರೆ, ಗೌತಮ ಚೌಹಾಣ್, ರಾಹುಲ ಉದ್ದಾ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.