ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ | ಯೋಗ ದಿನಾಚರಣೆಗೆ ಜನಪ್ರತಿನಿಧಿಗಳ ಗೈರು

Published 21 ಜೂನ್ 2024, 4:09 IST
Last Updated 21 ಜೂನ್ 2024, 4:09 IST
ಅಕ್ಷರ ಗಾತ್ರ

ಬೀದರ್: ನಗರದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ಹತ್ತನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ಮೋಡ ಮುಸುಕಿದ ತಂಪು ವಾತಾವರಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಉತ್ಸಾಹದಿಂದ ಯೋಗದ ವಿವಿಧ ಆಸನಗಳನ್ನು ಸಾಮೂಹಿಕವಾಗಿ ಮಾಡಿದರು.

ಉದ್ಘಾಟನೆ ನೆರವೇರಿಸಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ್ ಖಂಡ್ರೆ, ಸ್ಥಳೀಯ ಶಾಸಕರೂ ಆದ ಪೌರಾಡಳಿತ ಸಚಿವ ರಹೀಂ ಖಾನ್ ಗೈರು ಹಾಜರಾಗಿದ್ದರು.

ಜಿಲ್ಲಾಡಳಿತ, ಆಯುಷ್ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಸಮಾರಂಭವನ್ನು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಉದ್ಘಾಟಿಸಿ, ನಿತ್ಯ ಯೋಗ ಮಾಡುವುದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿ ಇರಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್., ಡಿವೈಎಸ್ಪಿ ಶಿವನಗೌಡ ಪಾಟೀಲ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT