ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೋತ್ಸಾಹಕ ಕ್ರೀಡಾ ವೇತನಕ್ಕೆ ಅರ್ಜಿ ಆಹ್ವಾನ

Last Updated 27 ಮೇ 2021, 14:13 IST
ಅಕ್ಷರ ಗಾತ್ರ

ಬೀದರ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 6 ರಿಂದ 10ನೇ ತರಗತಿಯ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ರೂ. 10 ಸಾವಿರ ಪ್ರೋತ್ಸಾಹ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಜೂನ್ 25 ರ ಒಳಗೆ http://sserviceonline.gov.in/ karnataka ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಥ್ಲೆಟಿಕ್ ತರಬೇತುದಾರ ಮೌಲಪ್ಪ (ಮೊ: 9880315461) ಅವರನ್ನು ಸಂಪರ್ಕಿಸಬಹುದು ಎಂದು ಹೇಳಿಕೆ ತಿಳಿಸಿದೆ.


ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ
ಬೀದರ್
: ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ ಕ್ರೀಡೆಗಳಲ್ಲಿ ಸಾಧನೆ ತೋರಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ.
ಕ್ರೀಡಾಪಟುಗಳು ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ತಮ್ಮ ವಿವರಗಳನ್ನು ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಮೊಬೈಲ್ ಸಂಖ್ಯೆ 9590093837 ಅಥವಾ 9986113525 ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ಕಲಾವಿದರ ನೋಂದಣಿಗೆ ಅವಕಾಶ
ಬೀದರ್:
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲೆಯಲ್ಲಿ ಈಗಾಗಲೇ ನೋಂದಣಿಯಾದ ಕಲಾವಿದರು ಹಾಗೂ ಕಲಾ ತಂಡಗಳನ್ನು ಹೊರತುಪಡಿಸಿ ಹೊಸ ಪ್ರತಿಭಾವಂತ ಕಲಾವಿದರು ಹಾಗೂ ಕಲಾ ತಂಡಗಳ ನೋಂದಣಿಗೆ ಅವಕಾಶ ಕಲ್ಪಿಸಿದೆ.
ಕಲಾವಿದರು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಇತ್ತೀಚಿನ ಭಾವಚಿತ್ರ, ಹಿಂದಿನ ಸಾಂಸ್ಕøತಿಕ ಕಾರ್ಯಕ್ರಮಗಳ ಛಾಯಾಚಿತ್ರಗಳೊಂದಿಗೆ ಡಾ. ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಇರುವ ಕಚೇರಿಯಲ್ಲಿ ಹೆಸರು ನೋಂದಾಯಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ತಿಳಿಸಿದ್ದಾರೆ.

ಕೋವ್ಯಾಕ್ಸಿನ್ ಎರಡನೇ ಡೋಸ್ ಪಡೆಯಿರಿ
ಬೀದರ್:
ನಗರದ ಎಲ್ಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ನೀಡಲಾಗುತ್ತಿದೆ ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ತಿಳಿಸಿದ್ದಾರೆ.
ಮೊದಲ ಡೋಸ್ ಪಡೆದು ಆರು ವಾರ ಪೂರ್ಣಗೊಂಡಿರುವ ಅರ್ಹ ಫಲಾನುಭವಿಗಳು ಎರಡನೇ ಡೋಸ್ ಪಡೆಯಬೇಕು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT