ಭಾಲ್ಕಿ: ‘ಕೊರೊನಾ ಸೋಂಕು ನಿರ್ವ ಹಣೆಯಲ್ಲಿ ಸಂಪೂರ್ಣ ವಿಫಲವಾಗಿ, ಸಾವಿರಾರು ಮುಗ್ಧ ಜನರ ಸಾವಿಗೆ ಕಾರಣವಾದ ಬಿಜೆಪಿ ಈಗ, ಜನರ ತೆರಿಗೆ ಹಣವನ್ನು ಕಾಂಗ್ರೆಸ್ ವಿವೇಚನೆಯಿಂದ ವೆಚ್ಚ ಮಾಡಿದ್ದರೆ ಕೊರೊನಾ ನಿಯಂತ್ರಿಸಬಹುದಾಗಿತ್ತು ಎಂದು ಆರೋಪಿಸುತ್ತಿರುವುದು ಅರ್ಥಹೀನ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು ಬೇಜವಾಬ್ದಾರಿತನ ಆಡಳಿತದ ಲೋಪ ಮರೆಮಾಚಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಾಂಗ್ರೆಸ್ ಮೇಲೆ ಆರೋಪ ಮಾಡುವುದು ಅವರ ಬಾಲಿಶನತಕ್ಕೆ ಹಿಡಿದ ಕನ್ನಡಿಯಾಗಿದೆ’ ಎಂದು ತಿರುಗೇಟು ನೀಡಿದ್ದಾರೆ.

ಸರ್ಕಾರದ ಲೋಪಗಳನ್ನು ಪಟ್ಟಿ ಮಾಡಿರುವ ಖಂಡ್ರೆ ಅವರು 10 ಪ್ರಶ್ನೆಗಳನ್ನು ಕೇಳುವ ಮೂಲಕ ಸರ್ಕಾರದಿಂದ ಉತ್ತರಕ್ಕೆ ಒತ್ತಾಯಿಸಿದ್ದಾರೆ.

‘ಕೋವಿಡ್ 2ನೇ ಅಲೆಯ ಭೀತಿಯಿಂದ ಮಾರ್ಚ್ ತಿಂಗಳಲ್ಲಿ ನೆರೆಯ ತೆಲಂಗಾಣ ಸೇರಿ 10 ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ– ಕಾಲೇಜುಗಳನ್ನು ಬಂದ್ ಮಾಡ ಲಾಯಿತು. ಕರ್ನಾಟಕ ಸರ್ಕಾರವೇ ಕೋವಿಡ್ ಕುರಿತಂತೆ ರೂಪಿಸಿದ್ದ ತಜ್ಞರ ಸಮಿತಿ ಸಹ ಮಾರ್ಚ್ನಲ್ಲೇ ಶಾಲೆ-ಕಾಲೇಜು ಕೊರೊನಾ ಹಾಟ್ಸ್ಪಾಟ್ ಆಗಲಿವೆ ಎಂದು ಮುನ್ನೆಚ್ಚರಿಕೆ ನೀಡಿದರೂ ಕಡೆಗಣಿಸಿ ವಿದ್ಯಾಗಮ, ಭೌತಿಕ ತರಗತಿ ನಡೆಸಿದ ಪರಿಣಾಮ ಹಾಗೂ ಚುನಾವಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿದ ಕಾರಣ ರಾಜ್ಯದಲ್ಲಿ 600ಕ್ಕೂ ಹೆಚ್ಚು ಶಿಕ್ಷಕರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಇದೆ’ ಎಂದಿದ್ದಾರೆ.

‘ಮಾರ್ಚ್ ಆರಂಭದಲ್ಲಿ ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳವಾಗಿದೆ. ಕೂಡಲೇ ಗಡಿಗಳನ್ನು ಬಂದ್ ಮಾಡಿ, ಆರ್ಟಿಪಿಸಿಆರ್, ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಹೆಚ್ಚಳ ಮಾಡಿ ಎಂದು ಒತ್ತಾಯಿಸಿದರೂ ನಿರ್ಲಕ್ಷಿಸಿ ಉಪಚುನಾವಣೆ ಆಗುವ ತನಕ ರಾಜ್ಯದ ಹಿತ ಮರೆತ ಸರ್ಕಾರ ಕೋವಿಡ್ 2ನೇ ಅಲೆ ಹೆಚ್ಚಳಕ್ಕೆ ಕಾರಣವಲ್ಲವೇ?’ ಎಂದು ಕೇಳಿದ್ದಾರೆ.

‘ಮಾರ್ಚ್ ಮಧ್ಯದಲ್ಲಿ ಸತತವಾಗಿ ನಿತ್ಯ ರಾಜ್ಯದಲ್ಲಿ 1000 ಕೊರೊನಾ ಪ್ರಕರಣ ಬಂದಾಗ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ, ನೆರೆ ರಾಜ್ಯದೊಂದಿಗೆ ನಮ್ಮನ್ನು ಹೋಲಿಸಬೇಡಿ, ಎಲ್ಲ ಸರಿ ಇದೆ ಎಂದು ಜನರಲ್ಲಿ ಭ್ರಮೆ ಹುಟ್ಟಿಸಲಾಯಿತು. ಲಕ್ಷ ಲಕ್ಷ ಜನರನ್ನು ಸೇರಿಸಿ ಚುನಾವಣಾ ಪ್ರಚಾರ ಸಭೆ ನಡೆಸಿ, ಜಾತ್ರೆ, ಉತ್ಸವ, ಸಿನಿಮಾ, ಸಂತೆಗೆ ಅವಕಾಶ ಮಾಡಿಕೊಟ್ಟಿರುವುದು ರಾಜ್ಯದಾದ್ಯಂತ ಸೋಂಕು ಹೆಚ್ಚಳಕ್ಕೆ ಕಾರಣ’ ಎಂದಿದ್ದಾರೆ.

‘ಚಿತ್ರಮಂದಿರಗಳಲ್ಲಿ ಒಟ್ಟು ಆಸನದ ಶೇ 50 ರಷ್ಟು ಮಾತ್ರ ಪ್ರವೇಶಕ್ಕೆ ಮಾತ್ರ ಅವಕಾಶ ಎಂದು ಬೆಳಿಗ್ಗೆ ಆದೇಶ ಹೊರಡಿಸಿ, ಸಂಜೆ ಬದಲಾವಣೆ ಮಾಡಿ ಆಡಳಿತವನ್ನೇ ನಗೆಪಾಟಲಿಗೆ ಈಡು ಮಾಡಿದ ಸರ್ಕಾರದ ಹೊಣೆಗೇಡಿತನಕ್ಕೆ ಯಾರನ್ನು ಗುರಿ ಮಾಡುತ್ತೀರಿ? ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣವಲ್ಲವೆ?’ ಎಂದು ಕೇಳಿದ್ದಾರೆ.

‘ಕರ್ನಾಟಕ ಹೈಕೋರ್ಟ್ ರಾಜ್ಯಕ್ಕೆ 1200 ಎಂ.ಟಿ. ಆಮ್ಲಜನಕ ನೀಡಬೇಕು ಎಂದು ತೀರ್ಪು ನೀಡಿದರೂ, ಅದನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುವ ಕೇಂದ್ರ ಸರ್ಕಾರದ ವಿರುದ್ಧ ಚಕಾರವೆತ್ತದೆ, ಕನಿಷ್ಠ ಸರ್ಕಾರದ ನಿಲುವನ್ನೂ ಬಹಿರಂಗಪಡಿಸದೆ, ರಾಜ್ಯದ ಜನರಿಗೆ, ರಾಜ್ಯಕ್ಕೆ ದ್ರೋಹ ಮಾಡಿದ ಸರ್ಕಾರ ಮತ್ತು ಸಂಸದರ ಹೇಡಿತನಕ್ಕೆ ಯಾರನ್ನು ಹೊಣೆ ಮಾಡುತ್ತೀರಿ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.