ಇಸ್ಲಾಂಪುರ(ಜನವಾಡ): ಬೀದರ್ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಶಿಥಿಲ ವಿದ್ಯುತ್ ಕಂಬ ಅಪಾಯ ಆಹ್ವಾನಿಸುತ್ತಿದೆ.

ಗ್ರಾಮದ ಬಸವೇಶ್ವರ ವೃತ್ತ ಸಮೀಪ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ಕಾಂಕ್ರೀಟ್ ಉದುರಿದ್ದು, ಒಳಗಿನ ಕಬ್ಬಿಣದ ರಾಡುಗಳು ತುಕ್ಕು ಹಿಡಿದಿವೆ. ಕಂಬ ದುರ್ಬಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಬೀಳುವ ಲಕ್ಷಣಗಳಿವೆ ಎಂದು ಚಂದ್ರಕಾಂತ ಮಡಿವಾಳ, ದತ್ತಾತ್ರೇಯ ವಾಘಮಾರೆ ತಿಳಿಸಿದ್ದಾರೆ.

ಮಳೆ-ಗಾಳಿ ಬಂದರೆ ಕಂಬ ಮುರಿದು ಬೀಳುವ ಸ್ಥಿತಿಯಲ್ಲಿದೆ. ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಸಂಭಾವ್ಯ ಅನಾಹುತ ತಪ್ಪಿಸಲು ಕೂಡಲೇ ಶಿಥಿಲ ಕಂಬ ತೆರವುಗೊಳಿಸಿ ಹೊಸ ಕಂಬ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-33-1425057670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.