ಸೋಮವಾರ, ಮೇ 17, 2021
22 °C

‘ಟಿಕೆಟ್ ಆಕಾಂಕ್ಷಿಗಳಲ್ಲಿ ಅತೃಪ್ತಿ ಇಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಸವಕಲ್ಯಾಣ: ‘ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಬಯಸಿದ್ದ ಇತರೆ ಆಕಾಂಕ್ಷಿಗಳಲ್ಲಿ ಶರಣು ಸಲಗರ ಅಭ್ಯರ್ಥಿಯಾದ ಬಗ್ಗೆ ಅತೃಪ್ತಿ ಇಲ್ಲ. ಎಲ್ಲರೂ ಕ್ಷೇತ್ರದಲ್ಲಿ ಭರಾಟೆಯ ಪ್ರಚಾರ ಕೈಗೊಂಡಿದ್ದೇವೆ’ ಎಂದು ಟಿಕೆಟ್‌ ಆಕಾಂಕ್ಷಿಗಳಲ್ಲೊಬ್ಬರಾದ ಸೂರ್ಯಕಾಂತ ಚಿಲ್ಲಾಬಟ್ಟೆ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಡಾ.ಅಂಬೇಡ್ಕರ್ ಜಯಂತಿ ಆಚರಣೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಟಿಕೆಟ್‌ಗೆ ಪೈಪೋಟಿ ಇರುವುದು ಸಹಜ. ನಂತರದಲ್ಲಿ ಎಲ್ಲರೂ ಕೈಜೋಡಿಸಿ ಕೆಲಸ ಮಾಡಬೇಕಾಗುತ್ತದೆ. ಪಕ್ಷವೇ ನಮಗೆಲ್ಲರಿಗೆ ಮುಖ್ಯವಾಗಿದೆ. ಆದ್ದರಿಂದ ಬಿಜೆಪಿ ಗೆಲುವಿಗೆ ಮುಖ್ಯಮಂತ್ರಿಯವರ, ಸಚಿವರ, ಪಕ್ಷದ ಮುಖಂಡರ, ಪದಾಧಿಕಾರಿಗಳ ಜತೆಯಲ್ಲಿ ಕ್ಷೇತ್ರದಾದ್ಯಂತ ಪ್ರಚಾರ ಕೈಗೊಂಡಿದ್ದೇವೆ. ಅಭ್ಯರ್ಥಿ ಶರಣು ಸಲಗರ 25 ಸಾವಿರಕ್ಕೂ ಅಧಿಕ ಮತಗಳಿಂದ ಜಯಗಳಿಸುವುದು ನಿಶ್ಚಿತ’ ಎಂದರು.

ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ವಕಾರೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯರಾದ ಗುಂಡುರೆಡ್ಡಿ, ಸುಧೀರ ಕಾಡಾದಿ, ಪ್ರಮುಖರಾದ ಪ್ರದೀಪ ವಾತಡೆ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅನಿಲ ಭೂಸಾರೆ, ಲತಾ ಹಾರಕೂಡೆ, ಸಂಜೀವ ಜಾಧವ, ಹಣಮಂತ ಧನಶೆಟ್ಟಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು