ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೊ ಅಧ್ಯಕ್ಷರಿಗೆ ‘ಅನುಭವ ಮಂಟಪ’ ಪ್ರಶಸ್ತಿ

Published 10 ನವೆಂಬರ್ 2023, 16:03 IST
Last Updated 10 ನವೆಂಬರ್ 2023, 16:03 IST
ಅಕ್ಷರ ಗಾತ್ರ

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಇಸ್ರೊ ಅಧ್ಯಕ್ಷ ಎಸ್.ಸೋಮನಾಥ ಅವರು ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯಿಂದ ನೀಡುವ ರಾಷ್ಟ್ರೀಯ ‘ಅನುಭವ ಮಂಟಪ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ‘ಸೋಮನಾಥ ಅವರ ನೇತೃತ್ವದಲ್ಲಿ ಚಂದ್ರಯಾನ–3 ಯಶಸ್ವಿಯಾಗಿದ್ದು, ದೇಶದ ಕೀರ್ತಿ ಹೆಚ್ಚಿದೆ. ಆದಕಾರಣ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಲ್ಕಿ ಬಸವಲಿಂಗ ಪಟ್ಟದ್ದೇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಸಾಲಿನಿಂದ ಈ ಪ್ರಶಸ್ತಿ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ನವೆಂಬರ್ 25ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ ‘ಅನುಭವ ಮಂಟಪ ಉತ್ಸವ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ’ ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ಶುಕ್ರವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT