ದೇಶದ ಆರ್ಥಿಕ ಪ್ರಗತಿಯಲ್ಲೂ ಮಹತ್ವದ ಪಾತ್ರ ಮಹತ್ವದ್ದು

ಬೀದರ್: ‘ಗ್ರಾಮೀಣ ಪ್ರದೇಶಕ್ಕೆ ಆರ್ಥಿಕ ಸೌಲಭ್ಯಗಳನ್ನು ಒದಗಿಸುತ್ತಿರುವ ಸಹಕಾರಿ ಕ್ಷೇತ್ರವು ದೇಶದ ಆರ್ಥಿಕ ಪ್ರಗತಿಯಲ್ಲೂ ಮಹತ್ವದ ಪಾತ್ರ ವಹಿಸುತ್ತಿದೆ’ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ಅಧ್ಯಕ್ಷ ಡಾ.ನಾಗೇಶ ಪಾಟೀಲ ಅಭಿಪ್ರಾಯಪಟ್ಟರು.
ಇಲ್ಲಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯಲ್ಲಿ ಕಲಬುರ್ಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಅಫ್ ಕೋಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವತಿಯಿಂದ ಬ್ಯಾಂಕ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿಯು ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರಫ್ತು ಉದ್ಯಮಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಸರ್ಕಾರ ಸಹಕಾರ ಕೇತ್ರಕ್ಕೆ ಸಹಾಯ ಹಸ್ತ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ’ ಎಂದರು.
‘ಜನರಿಗೆ ಸುಲಭ ಸೇವೆಗಳನ್ನು ನೀಡುವಲ್ಲಿ ಬೀದರ್ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮುಂಚೂಣಿಯಲ್ಲಿದೆ. ಬೀದರ್ ಡಿ.ಸಿ.ಸಿ ಬ್ಯಾಂಕ್ ಗ್ರಾಹಕ ಸೇವೆಗಳನ್ನು ನೀಡುವಲ್ಲಿ ದೇಶದ ಇತರೆ ಬ್ಯಾಂಕ್‌ಗಳಿಗೆ ಮಾದರಿಯಾಗಿದೆ. ಸಾಲ ಕೊಡುವ ಜತೆಗೆ ಸೇವಾ ಚಟುವಟಿಕೆಗಳನ್ನು ಕೈಗೊಂಡಿದೆ’ ಎಂದು ತಿಳಿಸಿದರು.
‘ಗ್ರಾಮೀಣ ಪ್ರದೇಶದ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಮುಖ್ಯ ವಾಹಿನಿಗೆ ಕರೆತರುವ ಯತ್ನ ಮಾಡುವುದು ಸಹಕಾರಿ ರಂಗದ ಗುರಿಯಾಗಬೇಕು, ಕೇವಲ ಲಾಭ-ಗಳಿಕೆ ಜತೆಗೆ ಸದಸ್ಯರಿಗೆ ಆಧುನಿಕ ತಂತ್ರಜ್ಞಾನ ಒದಗಿಸಿ ಅವರ ಆರ್ಥಿಕ ಸಮೃದ್ಧಿಗೆ ಕಾರಣವಾಗಬೇಕು’ ಎಂದು ಹೇಳಿದರು.
ಬೀದರ್ ಡಿಸಿಸಿ ಬ್ಯಾಂಕಿನ ಉಪ ಪ್ರಧಾನ ವ್ಯವಸ್ಥಾಪಕ ಸದಾಶಿವ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾದರು.
ಕಲಬುರಗಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ–ಆಪರೇಟಿವ್ ಮ್ಯಾನೇಜಮೆಂಟ್‌ನ ಪ್ರಾಂಶುಪಾಲ ರಾಜೇಶ ಯಾವಗಲ್ ತರಬೇತಿಯ ಉದ್ದೇಶಗಳನ್ನು ತಿಳಿಸಿದರು.ಸಂಪನ್ಮೂಲ ವ್ಯಕ್ತಿ ಅರುಣಕುಮಾರ ಉಪನ್ಯಾಸ ನೀಡಿದರು.
ಡಾ ಗುರುಪಾದಪ್ಪ ನಾಗಮಾರಪಳ್ಳಿ ಸಹಾರ್ದ ತರಬೇತಿ ಸಂಸ್ಥೆಯ ನಿರ್ದೇಶಕ ಸುಬ್ರಹ್ಮಣ್ಯ ಪ್ರಭು ಸ್ವಾಗತಿಸಿದರು. ಉಪನ್ಯಾಸಕ ಎಸ್. ಜಿ. ಪಾಟೀಲ ಅಧೀಕ್ಷಕ ಕರಬಸಯ್ಯ ಸ್ವಾಮಿ ನಿರೂಪಿಸಿದರು. ಡಿಸಿಸಿ ಬ್ಯಾಂಕಿನ ಅಧೀಕ್ಷಕ ಶ್ರೀಧರ ಕುಲಕರ್ಣಿ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.